ಕೊಂಡಸಂದ್ರ ಕಾಶಿ ವಿಶ್ವನಾಥ ದೇವಾಲಯ ಕಲ್ಯಾಣಿ ಸ್ವಚ್ಚತೆ

ಪ್ರಧಾನಿ ನರೇಂದ್ರ ಮೋದಿ ಅವರು 75 ವಸಂತಗಳನ್ನು ಪೂರೈಸಿ 76ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹಲವಾರು ಗಣ್ಯರು ಮತ್ತು ರಾಜಕಾರಣಿಗಳು ಅವರ ನಾಯಕತ್ವವನ್ನು ಶ್ಲಾಘಿಸುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ ತನ್ನ ಪ್ರಮುಖ ನಾಯಕನ ಜನ್ಮದಿನವನ್ನು ಗುರುತಿಸಲು ಹದಿನೈದು ವಾರಗಳ ಕಾಲ “ಸೇವಾ ಪಾಕ್ಷಿಕ”ಅಭಿಯಾನವನ್ನು ಆರಂಭಿಸಲಾಗಿದೆ ಎಂದು ದೇವನಹಳ್ಳಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಅಂಬರೀಶ್ ಗೌಡ ಹೇಳಿದರು.

ಈ ಹಿನ್ನೆಲೆ ಇಂದು ಪುರಾತನ ದೇವಾಲಯಗಳ ಸ್ವಚ್ಚತಾ ಸಮಿತಿ ವತಿಯಿಂದ ಗಿಡ ನೆಡುವುದು, ಸ್ವಚ್ಚತಾ ಕಾರ್ಯವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸಮೀಪದ ಕೊಂಡಸಂದ್ರ ಗ್ರಾಮದಲ್ಲಿರುವ ಕಾಶಿ ವಿಶ್ವನಾಥ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಅಕ್ಟೋಬರ್ 2 ರವರೆಗೆ ದೇಶಾದ್ಯಂತ ಆರೋಗ್ಯ ಶಿಬಿರಗಳಿಂದ ಹಿಡಿದು ಸ್ವಚ್ಛತಾ ಅಭಿಯಾನ, ಬುದ್ಧಿಜೀವಿಗಳ ಸಭೆಗಳು ಮತ್ತು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ಮೇಳಗಳವರೆಗೆ ಹಲವಾರು ಪ್ರಚಾರ, ಕಲ್ಯಾಣ, ಅಭಿವೃದ್ಧಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದರು.

ನಂತರ ವಕೀಲ ಪ್ರತಾಪ್ ಮಾತನಾಡಿ, ಸ್ವಯಂ ಸೇವಕರು, ತೂಬಗೆರೆ ಸುತ್ತಮುತ್ತಲಿನ ಸಾರ್ವಜನಿಕರು ಸೇರಿದಂತೆ ರಾಜಕೀಯ ಮುಖಂಡರು ಪುರಾತನ ಕಲ್ಯಾಣಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಇಂದು ಬೆಳಗ್ಗೆಯಿಂದಲೂ ನೂರಕ್ಕೂ ಹೆಚ್ಚು ಸ್ವಯಂ ಸೇವಕರಿಂದ ಕಲ್ಯಾಣಿ ಸ್ವಚ್ಚತಾ ಕಾರ್ಯ ನಡೆಯಿತು‌. ಕಲ್ಯಾಣಿಗಳ ಸ್ವಚ್ಚತೆಯಿಂದ ಮಳೆ ನೀರು ನಿಂತು ಅಂತರ್ಜಲ ಅಭಿವೃದ್ಧಿಯಾಗುವ ಉದ್ದೇಶದಿಂದ ಸ್ವಚ್ಚತೆ ಮಾಡಲಾಯಿತು ಎಂದರು.

ನಂತರ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನದ ಅಂಗವಾಗಿ ಇಂದು ಕೊಂಡಸಂದ್ರದ ಕಾಶಿ ವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯವನ್ನು ಹಮ್ಮಿಕೊಳ್ಳಾಗಿದೆ. ಕಾಲಕಾಲಕ್ಕೆ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿದರೆ ಅಂರ್ಜಲ ಮಟ್ಟ ಹೆಚ್ಚಾಗುತ್ತದೆ. ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ರವಿ, ಓಬ್ದೇನಹಳ್ಳಿ‌ ಮುನಿಯಪ್ಪ, ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು, ಸ್ವಯಂಸೇವಕರು ಸೇರಿದಂತೆ ಪುರಾತನ ದೇವಾಲಯಗಳ ಸ್ವಚ್ಚತಾ ಸಮಿತಿ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

4 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

6 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

9 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

21 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago