ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ..

ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ ಕಾಯಿಗಳನ್ನು ಅರೆಬರೆ ತಿಂದು ಎಸ್ಕೇಪ್ ಆಗಿದೆ.. ಕರಡಿ ಉಪಟಳದಿಂದ ರೈತರು ಜೀವ ಭಯದಲ್ಲಿ ರಾತ್ರಿ ವೇಳೆ ತೋಟಗಳಿಗೆ ನೀರು ಹಾಯಿಸಲು ಹೋಗುತ್ತಿದ್ದಾರೆ.

ಜೊತೆಗೆ ಬದುಗಳಲ್ಲಿರುವಂತಹ ಹುತ್ತಗಳನ್ನು ಕೊರೆದು ಜೇನು ತಿಂದು ಹೋಗಿದೆ. ಈಗಾಗಲೇ ಎರಡು ಬಾರಿ ಹೊಲದಲ್ಲಿ ನೀರನ್ನು ಕಟ್ಟಲು ಹೋದ ರೈತರ ಮೇಲೆ ದಾಳಿ ಮಾಡಿ ಗಾಯಪಡಿಸಿತ್ತು. ಸದ್ಯ ರೈತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು  ಹಿಡಿದು ರೈತರಲ್ಲಿರುವ ಭಯವನ್ನು ಹೋಗಲಾಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು‌.

Ramesh Babu

Journalist

Recent Posts

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

47 minutes ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

1 hour ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

3 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

7 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

19 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

1 day ago