ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿದ್ದ ಮೂರು ಮೇಕೆಗಳನ್ನು ಕಳ್ಳರು ಎಸ್ಕೇಪ್ ಮಾಡಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ರೈತ ಕೃಷ್ಣಪ್ಪ ಅವರಿಗೆ ಸೇರಿದ ಸುಮಾರು 60 ಸಾವಿರ ರೂ. ಬೆಲೆಬಾಳುವ ಮೂರು ಮೇಕೆಗಳನ್ನು ಕಳವು ಮಾಡಿದ್ದಾರೆ. ರಾತ್ರಿ ದನದ ಕೊಟ್ಟಿಗೆಯಲ್ಲಿ ಜಾನುವಾರು ಸಮೇತ ಮೇಕೆಗಳನ್ನು ಕಟ್ಟಿಹಾಕಲಾಗಿತ್ತು. ಮಂಗಳವಾರ ಬೆಳಿಗ್ಗೆ ಜಾನುವಾರುಗಳನ್ನು ಹೊರಗೆ ಕಟ್ಟಿಹಾಕಲು ಹೋದಾಗ ಕೊಟ್ಟಿಗೆಯ ಬಾಗಿಲ ಬೀಗ ಮುರಿದು ಎರಡು ಹೆಣ್ಣುಮೇಕೆ, ಒಂದು ಗಂಡು ಮೇಕೆ ಕದ್ದೋಯ್ದಿರುವುದು ಕಂಡು ಬಂದಿದೆ.
ತಾಲೂಕಿನ ಹಲವು ಗ್ರಾಮಗಳಲ್ಲಿ ಜಾನುವಾರು ಕಳ್ಳತನದಿಂದ ರೈತರು ಕಂಗಾಲಾಗಿದ್ದಾರೆ. ಒಂದು ಕಡೆ ಚಿರತೆ ಕಾಟ, ಮತ್ತೊಂದು ಕಡೆ ಜಾನುವಾರು ಕಳ್ಳರ ಕಾಟದಿಂದ ರೈತಾಪಿ ಜನರ ಬದುಕು ಅತಂತ್ರವಾಗಿದೆ. ಜಾನುವಾರು ಕಳ್ಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ರೈತರು ಒತ್ತಾಯಿಸಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…