Categories: ರಾಜ್ಯ

ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ..: ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಪತ್ರ..

ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು.

ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ ಪ್ರಧಾನಿ ಮೋದಿ ಭಾಷಣದ ನಡುವೆಯೇ ಅಂಗರಕ್ಷಕರ ಮೂಲಕ ಫೋಟೊವನ್ನು ತರಿಸಿಕೊಂಡರು.

ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಜೊತೆಗಿರುವ ಭಾವಚಿತ್ರವನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಬಾಲಕಿಯ ಹೆಸರು ನಾಗರತ್ನಾ ಮೇಟಿ. ಇವರು ನವನಗರ 42 ನೇ ಸೆಕ್ಟರ್ ನಿವಾಸಿಯಾಗಿದ್ದಾರೆ.

ಫೋಟೊ ಸ್ವೀಕರಿಸಿದ ಬಳಿಕ ಬಾಲಕಿಗೆ ಪತ್ರ ಬರೆಯುವುದಾಗಿ ಮೋದಿ ಹೇಳಿದ್ದರು. ಕೊಟ್ಟ ಮಾತಿನಂತೆ ಯುವತಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಪೋಸ್ಟ್ ಮೂಲಕ ಯುವತಿಗೆ ಇಂದು‌ ಮೋದಿ ಅವರು ಬರೆದ ಪತ್ರ ತಲುಪಿದೆ.

ಪತ್ರದ ವಿವರ..

ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ..

ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳೊಂದಿಗೆ. ಇಂತಿ, ನಿಮ್ಮ ನರೇಂದ್ರ ಮೋದಿ.. ಎಂದು ಉಲ್ಲೇಖಿಸಿದ್ದಾರೆ.

Ramesh Babu

Journalist

Recent Posts

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

2 hours ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

13 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

13 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 day ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

1 day ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

1 day ago