ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಕೈಗಾರಿಕೋದ್ಯಮಿ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಆದರೆ, ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಎರಡು ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಅಚ್ಚರಿ ವಿಷಯವಾದರೂ ರತನ್ ಟಾಟಾ ಅವರು ತಮ್ಮ ಜೀವನದಲ್ಲಿ ಮದುವೆಯೇ ಆಗಲಿಲ್ಲ. ಈ ಹಿಂದೆ ನಾಲ್ಕೈದು ಬಾರಿ ಮದುವೆ ಚರ್ಚೆ ಬಂದಿತ್ಥಾದರೂ ರತನ್ ಅವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ.
1961 ರಲ್ಲಿ ತಮ್ಮ ವೃತ್ತಿ ಜೀವನವನ್ನು ರತನ್ ಟಾಟಾ ಪ್ರಾರಂಭಿಸಿದರು. ಟಾಟಾ ಸ್ಟೀಲ್ಸ್ ಮಹಡಿಯಲ್ಲಿ ಸ್ವತಃ ತಾವೇ ಕೆಲಸ ಮಾಡುವ ಮೂಲಕ ತಳಮಟ್ಟದಿಂದ ಕೆಲಸ ಕಲಿತು ಅದರ ಅನುಭವದಿಂದ ಮೇಲೆ ಬಂದರು. ಇದು ಅವರ ಭವಿಷ್ಯದ ನಿರ್ಧಾರಗಳಿಗೆ ದೊಡ್ಡಮಟ್ಟಿನಲ್ಲಿ ನೆರವಾಯಿತು ಎಂದು ಅವರೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.
2024 ರಲ್ಲಿ ಅವರ ಒಟ್ಟಾರೆ ನಿವ್ವಳ ಆಸ್ತಿ ಮೊತ್ತವು 3800 ಕೋಟಿ ರೂಪಾಯಿ ಆಗುತ್ತದೆ. ರತನ್ ಟಾಟಾ ಅವರು ತಮ್ಮ ಸಂಪಾದನೆಯ ಶೇ 60 ಕ್ಕೂ ಹೆಚ್ಚು ಹಣವನ್ನು ಟಾಟಾ ಚಾರಿಟಿಗೆ (ದಾನ) ನೀಡುತ್ತಿದ್ದರು. ದೇಶದ ಕೋವಿಡ್ ಹೋರಾಟಕ್ಕೆ 1,500 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…