ಪ್ರತಿ ಐದು ಸಾವಿರ ಜನಸಂಖ್ಯೆಗೆ ಒಂದು ಬ್ಯಾಂಕ್ ಶಾಖೆ ತೆರೆದು, ಹೆಚ್ಚಿನ ವಾಣಿಜ್ಯ ವ್ಯವಹಾರಗಳನ್ನು ಮಾಡುವ ಮೂಲಕ ಆ ಭಾಗವನ್ನು ಅಭಿವೃದ್ಧಿಪಡಿಸಿ ಬಲಿಷ್ಠ ಭಾರತವನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಜನರ ಅನುಕೂಲಕ್ಕಾಗಿ ಬ್ಯಾಂಕ್ ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದರು.
ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ನಗದು ರಹಿತ ವ್ಯವಹಾರ ಮಾಡಬಹುದಾಗಿದೆ. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರ ಮಾಡಬಹುದಾಗಿದೆ ಎಂದರು.
ಗೃಹ ಸಾಲ, ವಾಣಿಜ್ಯ ಸಾಲ, ಕೃಷಿ ಸಾಲ, ಹೈನುಗಾರಿಕೆ ಸಾಲ ಹಾಗೂ ಇತರೆ ಸಾಲದ ಸೌಲಭ್ಯವಿದ್ದು, ಕೂಲಿ ಕಾರ್ಮಿಕರಿಗೆ ಶೂನ್ಯ ಮೊತ್ತದ ಖಾತೆಗಳನ್ನು ತೆರೆಯಲು ಅವಕಾಶವಿದೆ. ಈ ಮೂಲಕ ಸರ್ಕಾರದ ಅನುದಾನಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಬಹುದಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 45ನೇ ಕೆನರಾ ಬ್ಯಾಂಕ್ ಶಾಖೆ ಇದಾಗಿದೆ, ಕೊನಘಟ್ಟ ಭಾಗದ ಸುತ್ತಮುತ್ತ ಕೈಗಾರಿಕೆ ಚಟುವಟಿಕೆಗಳು ಪ್ರಾರಂಭವಾಗಿದ್ದು, ಜನಸಾಮನ್ಯರಿಗೆ ಬ್ಯಾಂಕ್ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಶಾಖೆಯನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ನಾಗರಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಬೆಂಗಳೂರು ವೃತ್ತ ಕಚೇರಿಯ ಪ್ರಬಂಧಕ ವ್ಯವಸ್ಥಾಪಕ ಮಹೇಶ್ ಪೈ, ದೇವನಹಳ್ಳಿ ವಲಯ ಕಚೇರಿಯ ವ್ಯವಸ್ಥಾಪಕ ವೆಂಕಟ ರಾಮುಲು, ಕೊನಘಟ್ಟ ಶಾಖೆಯ ವ್ಯವಸ್ಥಾಪಕ ಉದಯ್ ಕಿರಣ್, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…