ಫಾಕ್ಸ್ ಕಾನ್ ಕಂಪನಿಯ ಕಲುಷಿತ ನೀರು ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಕೆರೆಗಳ ಒಡಲು ಸೇರುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಫಾಕ್ಸ್ ಕಾನ್ ಕಂಪನಿ ಬಳಿ ಮಲ ಮಿಶ್ರಿತ, ಇತರೆ ಕಲುಷಿತ ನೀರಿಗಾಗಿಯೇ ಒಂದು ಕುಂಟೆಯನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಆ ಕುಂಟೆಯ ಕಟ್ಟೆಯನ್ನು ಹೊಡೆದು ರಾಜಕಾಲುವೆಗೆ ಹರಿಬಿಡಲಾಗಿದೆ. ಈ ಕಲುಷಿತ ನೀರು ನೇರವಾಗಿ ಕೊನಘಟ್ಟ ಗ್ರಾಮದ ಕೆರೆಗೆ ಹರಿದು ಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಅನುರಾಧಾ, ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ತಾ.ಪಂ ಇಓ ಮುನಿರಾಜು, ಗ್ರಾ.ಪಂ ಅಧ್ಯಕ್ಷೆ ಜ್ಯೋತಿ, ಪಿಡಿಓ ರಷ್ಮಿ, ನೂರಾರು ಸಾರ್ವಜನಿಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಹೊಡೆದಿರುವ ಕುಂಟೆಯ ಕಟ್ಟೆಯನ್ನು ಮುಚ್ಚುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದರು. ಇಲ್ಲಿನ ತ್ಯಾಜ್ಯ ನೀರು ರಾಜಕಾಲುವೆ ಸೇರಿದಂತೆ ಯಾವುದೇ ಮೂಲಗಳಿಂದ ಹೊರಬಾರದಂತೆ ಸಿಮೆಂಟ್ ವಾಲ್ ನಿರ್ಮಿಸುವಂತೆ ಆಗ್ರಹ ಮಾಡಿದರು.
ಬೆಳಗ್ಗೆ 10 ಗಂಟೆಯಿಂದಲೇ ಜನಪ್ರತಿನಿಧಿ, ಅಧಿಕಾರಿಗಳು. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಆದರೆ, ಫಾಕ್ಸ್ ಕಾನ್ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಬರುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಒಬ್ಬರ ಮೇಲೆ ಮತ್ತೊಬ್ಬರು ಹೇಳಿಕೊಂಡು ಕಾಲಹರಣ ಮಾಡುತ್ತಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಿದೆ. ಇಲ್ಲಿನ ನೂರಾರು ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಬಿಡಲಾಗಿತ್ತಿದೆ. ಇದರಿಂದ ಅರ್ಕಾವತಿ ನದಿ ಪಾತ್ರದ ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡ ಜನ ಜಾನುವಾರು ಕುಡಿಯಲು ಯೋಗ್ಯವಾಗದ ಸ್ಥಿತಿಗೆ ಬಂದು ತಲುಪಿದೆ. ಈ ಕೆರೆಗಳನ್ನು ಶುದ್ಧೀಕರಿಸುವಂತೆ, ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ಕಲುಷಿತ ನೀರನ್ನು ಕೆರೆಗಳಿಗೆ ಬಿಡುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಅನೇಕ ಹೋರಾಟಗಳು ಮಾಡಿಕೊಂಡು ಬರುತ್ತಿದ್ದಾರೆ. ಈ ಸಮಸ್ಯೆ ಜೊತೆಗೆ ಇದೀಗ ದೊಡ್ಡಬಳ್ಳಾಪುರ ತಾಲೂಕಿನ ಹೊರವಲಯದ ಕೊನಘಟ್ಟ ಸಮೀಪದಲ್ಲಿನ ಫಾಕ್ಸ್ ಕಾನ್ ಕಂಪನಿ ಮಲ ಮಿಶ್ರಿತ, ಕಲುಷಿತ ನೀರನ್ನು ಸ್ವಚ್ಛವಾಗಿರುವ ಕೊನಘಟ್ಟ ಕೆರೆಗೆ ಹರಿಬಿಟ್ಟಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾರಂಭದಲ್ಲಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…