ಕೊನಘಟ್ಟ ಗ್ರಾ.ಪಂಗೆ ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್‌ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿಗೆ ಅಧ್ಯಕ್ಷೆ ಮಂಜುಳಾ ಸ್ಥಾನದಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್‌ ಆಯ್ಕೆಯಾಗಿದ್ದಾರೆ. ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

ಪ್ರಭಾರ ಅಧ್ಯಕ್ಷರಾಗಿ ಆಶ್ವಥ್ ನಾರಾಯಣ್‌ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಸಮಸ್ಯೆಗಳಿಗೆ ಸ್ಪಂಧಿಸಿ ಶೀಘ್ರ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ಕುಂದು ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಪ್ರಭಾರ ಅಧ್ಯಕ್ಷರಾಗಿ ಆಯ್ಕೆಯಾದ ಆಶ್ವಥ್ ನಾರಾಯಣ್‌ ಅವರಿಗೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಮಾಜಿ ಅಧ್ಯಕ್ಷ ಕೆ.ಕೆ ಆಂಜಿನಪ್ಪ, ಗ್ರಾಪಂ ಮಾಜಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಪುಷ್ಪ ಶಿವಕುಮಾರ್‌ ಸೇರಿದಂತೆ ಸದಸ್ಯರು, ಇತರರು ಪುಷ್ಪಮಾಲೆ ಹಾಕಿ ಸಿಹಿ ತಿನಿಸಿ ಅಭಿನಂಧಿಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago