ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

.

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ ‘ಬಿ’ ತಂಡ ಮುಡಿಗೇರಿಸಿಕೊಂಡಿತು.

ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 50 ಸಾವಿರ ಬಹುಮಾನ ಜೊತೆಗೆ ಆಕರ್ಷಕ ಟ್ರೋಫಿ, ಕುರಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.

ರನ್ನರ ಅಪ್ ತಂಡಕ್ಕೆ 30ಸಾವಿರ ನಗದು, ಆಕರ್ಷಕ ಟ್ರೋಫಿಯನ್ನು ನೀಡಲಾಯಿತು.

ಬಹುಮಾನ ವಿತರಿಸಿ ಕೊನಘಟ್ಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ನಾರಾಯಣಸ್ವಾಮಿ ಮಾತನಾಡಿ, ದೈಹಿಕ ಚಟುವಟಿಕೆಯ ಮುಂದುವರಿದ ಭಾಗವೇ ಕ್ರೀಡೆ, ಪ್ರತಿಯೊಬ್ಬರೂ ಚಿಕ್ಕವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ಇಂದಿನ ಯುವಜನತೆಯು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು.

ಯುವಕರು ಉತ್ಸುಕತೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪ್ರತಿಭೆಯನ್ನು ಹೊರಹೊಮ್ಮಿಸಬೇಕು. ಅಲ್ಲದೇ ಯುವ ಶಕ್ತಿ ಸಂಘಟನಾತ್ಮಕ ಕ್ರೀಡಾ ಮನೋಭಾವ ಮೈಗೂಡಿಸಿಕೊಳ್ಳಬೇಕು. ಐಪಿಎಲ್‌, ಕೆಪಿಎಲ್‌, ರಣಜಿ, ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಅವಕಾಶ ದೊರೆಯುವಂತೆ ಆಗಲಿ ಎಂದು ಆಶಿಸಿದರು.

ಯಾವುದೆ ಕ್ರೀಡೆ ಮೋಜಿಗಾಗಿಯಲ್ಲ. ಕ್ರೀಡೆಯನ್ನು ಪ್ರತಿಯೊಬ್ಬರು ಅಭ್ಯಾಸ ಮಾಡುವುದರಿಂದ ಆರೋಗ್ಯ ಮತ್ತು ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದೆ ಸೋಲು ಗೆಲುವಿನ ಲೆಕ್ಕ ಮಾಡದೇ ಸ್ಪರ್ಧೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೊಡುಗೆ ನೀಡಬೇಕು. ಯುವಕರು ದುಶ್ಚಟಗಳಿಂದ ದೂರ ಇರಬೇಕು. ಉತ್ತಮ ಆರೋಗ್ಯಕ್ಕೆ ಕ್ರೀಡೆ, ವ್ಯಾಯಾಮ, ಪ್ರಾಣಾಯಾಮ ಹಾಗೂ ದೈಹಿಕ ಕಸರತ್ತು ಮಾಡಬೇಕು ಎಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು .

ಈ ಸಂದರ್ಭದಲ್ಲಿ ಊರಿನ‌ ಹಿರಿಯರ ಮುಖಂಡರು, ಯುವಕರು, ಕ್ರೀಡಾ ಸ್ಪರ್ಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

error: Content is protected !!