ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ 2017ರಲ್ಲಿ ಪ್ರೌಢಶಾಲೆ ಕಟ್ಟಡ ಉದ್ಘಾಟನೆಗೊಂಡಿದೆ. ಇದೀಗ ನೆಲ ಹಾಗೂ ಗೋಡೆಗಳಿಗೆ ಹಾಕಲಾಗಿದ್ದ ಸಿಮೆಂಟ್ ಕಿತ್ತು ಬರುತ್ತಿದೆ. ಇದರಿಂದ ಮಕ್ಕಳು ಯಾವುದೇ ತೊಂದರೆ ಇಲ್ಲದೇ ಕುಳಿತುಕೊಂಡು ಪಾಠ ಕೇಳೋದಕ್ಕೆ ಅಗದ ಪರಿಸ್ಥಿತಿಗೆ ಬಂದು ತಲುಪಿದೆ. ಜೊತೆಗೆ ಕೆಲ ಮೂಲಭೂತ ಸೌಕರ್ಯ ಸೇರಿದಂತೆ ಕಳೆದ ಕೆಲ ತಿಂಗಳುಗಳಿಂದ ಇಂಗ್ಲಿಷ್ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊನಘಟ್ಟ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ 71 ವಿದ್ಯಾರ್ಥಿಗಳ ಶಿಕ್ಷಣ ಡೋಲಾಯಮಾನವಾಗಿದೆ. ಇನ್ನು ಉತ್ತಮ ಫಲಿತಾಂಶ ನಿರೀಕ್ಷಿಸಲು ಹೇಗೆ ಸಾಧ್ಯ. ಎಸ್ ಡಿಎಂಸಿ ಏಕೋ ಇದರ ಬಗ್ಗೆ ಎಚ್ಚರ ವಹಿಸುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟವರು ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು. ಮಕ್ಕಳನ್ನ ಸರ್ಕಾರಿ ಶಾಲೆಯಲ್ಲೇ ಓದಿಸಿ ಎಂದು ಹೇಳುವ ರಾಜಕಾರಣಿಗಳು ಸರ್ಕಾರಿ ಶಾಲೆಗಳಿಗೊಮ್ಮೆ ಭೇಟಿ ನೀಡಬೇಕು. ಅಲ್ಲಿನ ಅವ್ಯವಸ್ಥೆ ಪರಿಶೀಲಿಸಿ ಸರಿಪಡಿಸುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದರೆ, ಖಾಸಗಿ ಶಾಲೆಗಳತ್ತ ಯಾರು ಮುಖ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಶಾಲೆಯಲ್ಲಿ ಇಂಗ್ಲಿಷ್ ಪಾಠ ಮಾಡುವುದಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಲಾಗಿತ್ತು, ಅವರು ಕಾರಣಾಂತರಗಳಿಂದ ಬಿಟ್ಟು ಹೋಗಿದ್ದಾರೆ. ಕೂಡಲೇ ಇನ್ನೆರಡು ದಿನಗಳಲ್ಲಿ ಹೊಸ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳಲಾಗುವುದು ಎಂದು ಪಬ್ಲಿಕ್ ಮಿರ್ಚಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…