ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರುವ ಘಟನೆ ತಡರಾತ್ರಿ 1 ಗಂಟೆ ಸುಮಾರಿನಲ್ಲಿ ನಡೆದಿದೆ.
ಮೃತರನ್ನು 38 ವರ್ಷದ ಎ.ಬಾಬು ಎಂದು ಗುರುತಿಸಲಾಗಿದೆ.
ಮೃತ ಬಾಬು 2011ರಿಂದ ಕೊನಘಟ್ಟ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದು, ನಿನ್ನೆ ರಾತ್ರಿ ಕೊನಘಟ್ಟದ ಆಸ್ಪತ್ರೆ ಕ್ವಾಟ್ರಸ್ ಬಳಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸದ್ಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. ಮೃತನಿಗೆ ಒಂದು ಗಂಡು ಮಗು ಸಹ ಇದೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.