ಕೊನೆಗೂ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಸಂಚಾರ ಪೊಲೀಸ್ ಠಾಣೆ ಮಂಜೂರು

ದೊಡ್ಡಬಳ್ಳಾಪುರವು ರಾಜ್ಯದ ರಾಜಧಾನಿ ಬೆಂಗಳೂರಿಗೆ ತೀರ ಸಮೀಪವಿದ್ದು, ದಿನೇ ದಿನೇ ಪ್ರಮುಖ ನಗರವಾಗಿ ಬೆಳೆಯುತ್ತಿದೆ. ನಗರ ಬೆಳೆದಂತೆ ವಾಹನ ದಟ್ಟಣೆ, ಅಪಘಾತಗಳಿಂದ ಸಾಕಷ್ಟು ಸಾವು-ನೋವು ಪ್ರಕರಣಗಳೂ ಸಹ ಹೆಚ್ಚಾಗುತ್ತಿವೆ.

ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಜತೆಗೆ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಉಪವಿಭಾಗಕ್ಕೆ ಸಂಚಾರ ಪೊಲೀಸ್ ಠಾಣೆ ಮಂಜೂರು ಮಾಡಲಾಗಿದೆ. ಈ ಮೂಲಕ ಇಲ್ಲಿನ ವಾಹನ ಚಾಲಕರು, ಸಾರ್ವಜನಿಕರ ಬಹುದಿನಗಳ ಬೇಡಿಕೆಯೊಂದು ಕೊನೆಗೂ ಈಡೇರಿದಂತಾಗಿದೆ.

ನಗರದ ದರ್ಗಾಪುರ‌ದಲ್ಲಿ( ಡಿ-ಮಾರ್ಟ್ ಎದುರು) ಸಂಚಾರಿ ಪೊಲೀಸ್ ಠಾಣೆಗೆ ಜಾಗ ಗುರುತಿಸಲಾಗಿದೆ ಎನ್ನಲಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಕೆಲ ತಿಂಗಳುಗಳಲ್ಲೇ ಹೊಸ ಸಂಚಾರ ಪೊಲೀಸ್ ಠಾಣೆ ಕಾರ್ಯಾರಂಭ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *