ಕೊನೆಗೂ ಸಿಕ್ಕಿಬಿದ್ದ ಶನಿಮಹಾತ್ಮ ದೇವಾಲಯಕ್ಕೆ ಮಾಂಸದ ತುಂಡು ತಂದಿದ್ದ ಆರೋಪಿಗಳು

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಕನಸವಾಡಿ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಮಾಂಸದ ತುಂಡುಗಳನ್ನು ಒಳಗೊಂಡ ಹೂವಿನ ಹಾರ ತಂದಿದ್ದ ಆರೋಪಿಗಳನ್ನು ಶನಿವಾರ ದೇವಾಲಯದ ಸಿಬ್ಬಂದಿ ಪತ್ತೆಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳು ಹೊಸಕೋಟೆ ತಾಲ್ಲೂಕಿನ ಕಂಬಲಹಳ್ಳಿ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋಚಾಲಕ ಸೋಮಶೇಖರ್ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಆರೋಪಿಗಳು ಒಂದು ತಿಂಗಳ ಹಿಂದೆಯು ಸಹ ಮಧ್ಯಾಹ್ನದ ಸಮಯದಲ್ಲಿ ದೇವಾಲಯಕ್ಕೆ ಬಂದು ಹೂವಿನ ಹಾರಗಳೊಂದಿಗೆ ಮಾಸಂದ ತುಂಡುಗಳನ್ನು ಪೋಣಿಸಿ ಸಿದ್ಧಪಡಿಸಲಾಗಿದ್ದ ಹಾರವನ್ನು ತಂದಿದ್ದರು.

ಮಧ್ಯಾಹ್ನದ ಸಮಯವಾಗಿದ್ದರಿಂದ ದೇವಾಲಯದ ಸಿಬ್ಬಂದಿ ಹೂವಿನ ಹಾರದ ಪ್ಲಾಸ್ಟಿಕ್ ಕವರ್ ನ್ನು ಬಾಗಿಲಿನಲ್ಲೇ ಪಡೆದು ಸಂಜೆಯ ಅಲಂಕಾರಕ್ಕೆ ಬಳಸಲಾಗುವುದು ಎಂದು ಹೇಳಿ ಕಳುಹಿಸಿದ್ದರು. ಸಂಜೆ ಹಾರಗಳನ್ನು ತೆಗೆದು ನೀರು ಹಾಕುವಾಗ ಮಾಂಸದ ತುಂಡುಗಳನ್ನು ಪೋಣಿಸಿದ್ದು ಬೆಳಕಿಗೆ ಬಂದಿತ್ತು.

ಆರೋಪಿಗಳು ದೇವಾಲಯಕ್ಕೆ ಬಂದು ಹೋಗಿದ್ದ ಎಲ್ಲಾ ದೃಶ್ಯಗಳನ್ನು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದದವು. ಈ ದೃಶ್ಯಗಳನ್ನು ಆದರಿಸಿ ದೊಡ್ಡಬೆಳವಂಗಲ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು ಆರೋಪಿಗಳು ಪತ್ತೆಯಾಗಿರಲಿಲ್ಲ. ಶನಿವಾರ ಮತ್ತೆ ಇದೇ ಆರೋಪಿಗಳು ದೇವಾಲಯಕ್ಕೆ ಹಾರ ಕೊಡಲು ಬಂದಾಗ ಸಿಸಿ ಟಿವಿ ದೃಶ್ಯಗಳ ಮೇಲೆ ತೀವ್ರ ನಿಗಾವಹಿಸಿದ್ದ ದೇವಾಲಯದ ಸಿಬ್ಬಂದಿ ಆರೋಪಿಗಳನ್ನು ಗುರುತಿಸಿ ಹಾರ ಕೊಡುವ ಸಂದರ್ಭದಲ್ಲೇ ಬಂಧಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಧಾರ್ಮಿಕ ಸ್ಥಳ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

8 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

20 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

23 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago