ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ ಅನುಮತಿ ನಿರಾಕರಿಸಲ್ಪಟ್ಟ ಹಿನ್ನೆಲೆಯಲ್ಲಿ ರದ್ದಾಗಿದೆ.
ವಕೀಲ ಪ್ರತಾಪ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್.ಎಸ್.ಘಾಟಿ, ಮೆಳೇಕೋಟೆ ಹಾಗೂ ತೂಬಗೆರೆ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ 20 ವಿದ್ಯಾರ್ಥಿಗಳನ್ನು ಸನ್ಮಾನಿಸಿ, ತಲಾ ₹5,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿತ್ತು.
ಕಾರ್ಯಕ್ರಮಕ್ಕೆ ಕಾಲೇಜು ವತಿಯಿಂದ ಮೊದಲೇ ಅನುಮತಿ ನೀಡಿದ್ದು, ಅದರಂತೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಒಂದು ದಿನ ಮೊದಲು ಕಾಲೇಜಿನ ಪ್ರಾಂಶುಪಾಲರು ದೂರವಾಣಿ ಮೂಲಕ ಸಂಪರ್ಕಿಸಿ, ಕಾಲೇಜು ಅಭಿವೃದ್ಧಿ ಸಮಿತಿಯಿಂದ ಅನುಮೋದನೆ ದೊರೆತಿಲ್ಲ ಎಂಬ ಕಾರಣ ನೀಡಿ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿದ್ದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.
ಈ ಕುರಿತು ವಕೀಲ ಪ್ರತಾಪ್ ಪ್ರತಿಕ್ರಿಯಿಸಿ, ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನೋಟ್ ಪುಸ್ತಕ, ಕಲಿಕಾ ಸಾಮಗ್ರಿಗಳನ್ನು ನಿರಂತರವಾಗಿ ನೀಡುತ್ತಾ ಬಂದಿದ್ದೇನೆ. ಈ ವರ್ಷ ನಿಯಮಾನುಸಾರ ಕಾಲೇಜಿನ ಅನುಮತಿ ಪಡೆದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅನುಮತಿ ಹಿಂಪಡೆಯಲಾಗಿರುವುದು ಬೇಸರ ತಂದಿದೆ. ಕಾರ್ಯಕ್ರಮಕ್ಕೆ ಯಾವ ಕಾರಣದಿಂದ ಅವಕಾಶ ನಿರಾಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ, ಆದರೆ ರಾಜಕೀಯ ಪಿತೂರಿಯಿಂದ ಕಾರ್ಯಕ್ರಮಕ್ಕೆ ತಡೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ತೂಬಗೆರೆಯಲ್ಲೇ ಸೂಕ್ತ ಸ್ಥಳ ಹಾಗೂ ದಿನಾಂಕ ನಿಗದಿಪಡಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿ, ಆಯ್ಕೆಯಾದ 20 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಾಪ್ ತಿಳಿಸಿದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…