ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು. ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ ಎಂದರು.
ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಹೇಳಿದರು.
ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ತಿಳಿಸಿದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…