ಕೊರೊನಾ ಉಲ್ಬಣ ವಿಚಾರ- ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು-ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗದಂತೆ ಆಸ್ಪತ್ರೆಗಳು ಸಜ್ಜಾಗಬೇಕು- ಸಿಎಂ ಸಿದ್ದರಾಮಯ್ಯ ಸೂಚನೆ

ಕೋವಿಡ್ ನಿರ್ವಹಣೆಗೆ ಸರ್ಕಾರದ ಬಳಿ ಸಾಕಷ್ಟು ಹಣ ಇದೆ. ಹಣಕಾಸಿಗೆ ಕೊರತೆ ಇಲ್ಲ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದಂತೆ ಆಸ್ಪತ್ರೆಗಳು ಸಜ್ಜಾಗಬೇಕು. ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಆಗಿದೆ. ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಜನರಲ್ಲಿ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಜನರಲ್ಲಿ ಪತ್ತೆಯಾಗಿದ್ದು, 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ  7 ಮಂದಿ ICU ನಲ್ಲಿದ್ದಾರೆ. ಅವರು ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ ಎಂದು ಸಿಎಂ‌ ಸಿದ್ದರಾಮಯ್ಯ ಮಾಹಿತಿ ನೀಡಿದರು.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಉನ್ನತ ಮಟ್ಟದ ಸಭೆ ನಡೆಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ನಿತ್ಯ 5,000, ಬೆಂಗಳೂರಲ್ಲಿ ಸಾವಿರ ಕೊರೊನಾ ಟೆಸ್ಟ್ ನಡೆಯುತ್ತಿದೆ. ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಅವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಲು ಸೂಚಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡುವಂತೆ ಹೇಳಿದ್ದೇನೆ ಎಂದರು.

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಬೇಕು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು ಎಂದು ಹೇಳಿದರು.

ಕೊವಿಡ್ ಚಿಕಿತ್ಸೆಗೆ ನಿಗದಿಪಡಿಸಲಾದ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ ಇರಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಲಸಿಕೆಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

11 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

16 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago