Rowdy Parade:ಕೊಲೆ ಆರೋಪಿಗಳು ಬಾಲ‌ ಬಿಚ್ಚಿದರೆ ಗಡಿಪಾರು ಫಿಕ್ಸ್- ಎಎಸ್ ಪಿ-2(ಅಪರಾಧ ವಿಭಾಗ) ಕೆ.ಎಸ್ ನಾಗರಾಜ್ ಖಡಕ್ ಎಚ್ಚರಿಕೆ

ಇಂದು ನಗರದ ಡಿವೈಎಸ್ ಪಿ ಕಚೇರಿ ಆವರಣದಲ್ಲಿ ಎಎಸ್ ಪಿ-2(ಅಪರಾಧ ವಿಭಾಗ) ಕೆ.ಎಸ್ ನಾಗರಾಜ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗಕ್ಕೆ ಒಳಪಡುವ ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬಳ್ಳಾಪುರ ನಗರ, ಹೊಸಹಳ್ಳಿ, ದೊಡ್ಡಬೆಳವಂಗಲ, ವಿಜಯಪುರ,‌ ವಿಶ್ವನಾಥಪುರ, ಚೆನ್ನರಾಯಪಟ್ಟಣ, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗಳ ಪರೇಡ್ ಹಮ್ಮಿಕೊಳ್ಳಲಾಗಿತ್ತು.

ಇತ್ತೀಚಿಗೆ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಅದರಲ್ಲೂ ರೌಡಿಶೀಟರ್ ಗಳು ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಡಿವೈಎಸ್ ಪಿ ಉಪವಿಭಾಗದಲ್ಲಿ ರೌಡಿ ಪರೇಡ್ ನಡೆಸಲಾಯಿತು.

ರೌಡಿ ಪರೇಡ್ ನಡೆಸಿ ಮಾಧ್ಯಮದವರೊಂದಿಗೆ ಎಎಸ್ ಪಿ-2(ಅಪರಾಧ ವಿಭಾಗ) ಕೆ.ಎಸ್ ನಾಗರಾಜ್ ಮಾತನಾಡಿ, ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದಲ್ಲಿ‌ ಸುಮಾರು 248 ರೌಡಿ‌ಶೀಟರ್ ಗಳು ಇದ್ದಾರೆ. ಅದರಲ್ಲಿ ಇಂದು ನಡೆದ ರೌಡಿ ಪರೇಡ್ ನಲ್ಲಿ 118 ಮಂದಿ ಹಾಜರಾಗಿದ್ದರು. ಇನ್ನು ಕೆಲವರು ಗೈರಾಗಿದ್ದಾರೆ. ಹಲವರಿಗೆ ಅನಾರೋಗ್ಯ ಕಾರಣದಿಂದ ಬಂದಿಲ್ಲ, ಮತ್ತೆ ಕೆಲವರು ಜೈಲಿನಲ್ಲಿದ್ದಾರೆ. ಇದರಲ್ಲಿ 25 ಜನ‌ ಕೊಲೆ ಆರೋಪಿಗಳಿದ್ದಾರೆ ಎಂದರು.

ಉದ್ದೇಶ ಪೂರ್ವಕವಾಗಿ ಕಾನೂನಿನ ಭಯವಿಲ್ಲದೇ ಜನಸಾಮಾನ್ಯರಿಗೆ ತೊಂದರೆ ನೀಡುವವರನ್ನು ರೌಡಿಪಟ್ಟಿಗೆ ಸೇರಿಸಲಾಗಿದೆ. ಕೆಲವರಿಗೆ ತಾನು ಮಾಡಿರುವ ತಪ್ಪು ಅರಿವಿಗೆ ಬಂದಿದ್ದು, ಮತ್ತೆ ಕೆಲವರಿಗೆ ಇನ್ನೂ ತಿಳುವಳಿಕೆ ಬರದೇ ಪುನರಾರ್ವತಿತವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ. ಅಂತವರಿಗೆ ಮತ್ತಷ್ಟು ಕಾನೂನಿನ ಕಠಿಣ ಶಿಕ್ಷೆ ವಿಧಿಸಲಾಗುವುದು. ಗಡಿಪಾರು ಸಹ ಮಾಡಲಾಗುವುದು ಎಂದು ಅವರು ತಿಳಿಸಿದರು.

ರೌಡಿ ಶೀಟರ್‌ಗಳು ಯಾವುದೇ ಕಾರಣಕ್ಕೂ ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಅಂತಹ ಕೃತ್ಯಗಳಿಗೂ ಸಹ ಕುಮ್ಮಕ್ಕು ನೀಡಬಾರದು. ಒಂದು ವೇಳೆ ತಪ್ಪು ಮಾಡಿದ್ದು ಕಂಡುಬಂದರೆ ತಕ್ಕ ಶಿಕ್ಷೆ ನೀಡಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದರು‌.

ಎಲ್ಲರಿಗೂ ತಂದೆ, ತಾಯಿ, ಮಡದಿ, ಮಕ್ಕಳು ಇರುತ್ತಾರೆ ಅವರಿಗೋಸ್ಕರ ರೌಡಿಶೀಟರ್ ಗಳು ಬದಲಾಗಬೇಕು. ಕೆಲವರು ಆಕಸ್ಮಿಕವಾಗಿ, ಪರೋಕ್ಷವಾಗಿ ತಪ್ಪು ಮಾಡಿರಬಹುದು, ಇನ್ನು ಕೆಲವರು ಬೇಕಂತಲೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಅಂತವರ ಮೇಲೆ ನಮ್ಮ ಇಲಾಖೆ ಹೆಚ್ಚಿನ ನಿಗಾವಹಿಸಿ ಮತ್ತಷ್ಟು ಕಾನೂನಿನ ಕ್ರಮ ಕೈಗೊಳ್ಳುತ್ತೇವೆ. ಯಾರೇ ಶಿಫಾರಸ್ಸು ಮಾಡಿದರೂ ರೌಡಿ ಹಾಳೆಯಿಂದ ಹೆಸರು ತೆಗೆಯುವುದಿಲ್ಲ. ರೌಡಿ‌ ಶೀಟರ್ ಓಪನ್ ಮಾಡೋದಕ್ಕೆ ಕೇವಲ ಒಂದು ಗಂಟೆ ಸಾಕು, ಆದರೆ, ರೌಡಿ ಪಟ್ಟಿಯಿಂದ ಹೆಸರು ತೆಗೆಯುವುದಕ್ಕೆ ಹಲವು ವರ್ಷಗಳೇ ಬೇಕಾಗುತ್ತದೆ. ಆದ್ದರಿಂದ ಯಾರೂ ಸಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದರು.

ಡಿವೈಎಸ್ಪಿ ರವಿ.ಪಿ ಮಾತನಾಡಿ, ರೌಡಿಶೀಟರ್ ಗಳು ಹಳೆಯ ಚಾಳಿ ಮುಂದುವರಿಸಬಾರದು. ಸಮಾಜದಲ್ಲಿ ಗೌರವಯುತವಾದ ಜೀವನ ರೂಪಿಸಿಕೊಳ್ಳಬೇಕು. ಅನಗತ್ಯ ತಂಟೆಗಳಲ್ಲಿ ಮೂಗ ತೂರಿಸಿದರೆ ಹುಷಾರ್‌ ಶಿಕ್ಷೆ ಕಟ್ಟಿಟ್ಟಬುತ್ತಿ ಎಂದರು.

ಯಾವ ಅಪರಾಧದಲ್ಲಿ ಭಾಗಿಯಾಗದೇ ಸನ್ನಡತೆಯಿಂದ ಜೀವನ ಸಾಗಿಸುತ್ತಿರುವ ಹಾಗೂ 60 ವರ್ಷ ಮೇಲ್ಪಟ್ಟವರ ರೌಡಿಶೀಟರ್ ಗಳ ಚಲನವಲನ ಗಮನಿಸಿ ರೌಡಿ ಪಟ್ಟಿಯಿಂದ ಹೆಸರು ತೆಗೆಯಲಾಗುವುದು.

ಕಾನೂನು ಬಾಹಿರ ಚಟುವಟಿಕೆಗಳನ್ನು ಮುಂದುವರಿಸುವುದು ಹಾಗೂ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿದ್ದಕ್ಕೆ ರೌಡಿ ಶೀಟರ್‌ ಆಗಿದ್ದೀರಿ. ಅದರಿಂದ ಹೊರಬರಬೇಕೆಂದರೆ ಗೌರವಯುತ ಜೀವನ ನಡೆಸಬೇಕು. ಮತ್ತೆ ಅಂಥದ್ದೇ ಕುಮ್ಮಕ್ಕು ಮುಂದುವರಿಸಿದರೆ ಶಿಕ್ಷೆ ಗ್ಯಾರೆಂಟಿ ಎಂದರು.

ನಿರಂತರ ಹತ್ತು ವರ್ಷ ಸಮಾಜದಲ್ಲಿ ಯಾರ ನೆಮ್ಮದಿಗೂ ಧಕ್ಕೆ ತರದಂತೆ ಜೀವನ ನಡೆಸಬೇಕು. ದೂರುಗಳೂ ಬರದಂತೆ ಇರಬೇಕು. ಹಾಗೆ ಮಾಡಿದರೆ ಮಾತ್ರ ರೌಡಿಶೀಟರ್‌ನಿಂದ ತೆರವು ಮಾಡುತ್ತೇವೆ ಎಂದು ಹೇಳಿದರು.

ಪೊಲೀಸ್ ಠಾಣೆ                  ಒಟ್ಟು ರೌಡಿಶೀಟರ್ ಸಂಖ್ಯೆ 

1.ದೊಡ್ಡಬಳ್ಳಾಪುರ ಗ್ರಾಮಾಂತರ- 52

2.ದೊಡ್ಡಬಳ್ಳಾಪುರ ನಗರ- 51

3.ಹೊಸಹಳ್ಳಿ- 10

4.ದೊಡ್ಡಬೆಳವಂಗಲ- 25

5.ವಿಜಯಪುರ- 30

6.ವಿಶ್ವನಾಥಪುರ- 22

7.ಚೆನ್ನರಾಯಪಟ್ಟಣ- 11

8.ರಾಜಾನುಕುಂಟೆ- 47

ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕಲ್ಲಪ್ಪ ಶ‌ಂಕರಪ್ಪ ಖರಾತ್ ಸೇರಿದಂತೆ  ವಿಜಯಪುರ, ವಿಶ್ವನಾಥಪುರ, ಚೆನ್ನರಾಯಪಟ್ಟಣ, ರಾಜಾನುಕುಂಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಳು‌ ಹಾಗೂ‌ ಸಿಬ್ಬಂದಿ ಭಾಗಿಯಾಗಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

1 hour ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago