ಇಂದು ನಗರದ ಡಿವೈಎಸ್ ಪಿ ಕಚೇರಿ ಆವರಣದಲ್ಲಿ ಎಎಸ್ ಪಿ-2(ಅಪರಾಧ ವಿಭಾಗ) ಕೆ.ಎಸ್ ನಾಗರಾಜ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗಕ್ಕೆ ಒಳಪಡುವ ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬಳ್ಳಾಪುರ ನಗರ, ಹೊಸಹಳ್ಳಿ, ದೊಡ್ಡಬೆಳವಂಗಲ, ವಿಜಯಪುರ, ವಿಶ್ವನಾಥಪುರ, ಚೆನ್ನರಾಯಪಟ್ಟಣ, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗಳ ಪರೇಡ್ ಹಮ್ಮಿಕೊಳ್ಳಲಾಗಿತ್ತು.
ಇತ್ತೀಚಿಗೆ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಅದರಲ್ಲೂ ರೌಡಿಶೀಟರ್ ಗಳು ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಡಿವೈಎಸ್ ಪಿ ಉಪವಿಭಾಗದಲ್ಲಿ ರೌಡಿ ಪರೇಡ್ ನಡೆಸಲಾಯಿತು.
ರೌಡಿ ಪರೇಡ್ ನಡೆಸಿ ಮಾಧ್ಯಮದವರೊಂದಿಗೆ ಎಎಸ್ ಪಿ-2(ಅಪರಾಧ ವಿಭಾಗ) ಕೆ.ಎಸ್ ನಾಗರಾಜ್ ಮಾತನಾಡಿ, ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದಲ್ಲಿ ಸುಮಾರು 248 ರೌಡಿಶೀಟರ್ ಗಳು ಇದ್ದಾರೆ. ಅದರಲ್ಲಿ ಇಂದು ನಡೆದ ರೌಡಿ ಪರೇಡ್ ನಲ್ಲಿ 118 ಮಂದಿ ಹಾಜರಾಗಿದ್ದರು. ಇನ್ನು ಕೆಲವರು ಗೈರಾಗಿದ್ದಾರೆ. ಹಲವರಿಗೆ ಅನಾರೋಗ್ಯ ಕಾರಣದಿಂದ ಬಂದಿಲ್ಲ, ಮತ್ತೆ ಕೆಲವರು ಜೈಲಿನಲ್ಲಿದ್ದಾರೆ. ಇದರಲ್ಲಿ 25 ಜನ ಕೊಲೆ ಆರೋಪಿಗಳಿದ್ದಾರೆ ಎಂದರು.
ರೌಡಿ ಶೀಟರ್‌ಗಳು ಯಾವುದೇ ಕಾರಣಕ್ಕೂ ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಅಂತಹ ಕೃತ್ಯಗಳಿಗೂ ಸಹ ಕುಮ್ಮಕ್ಕು ನೀಡಬಾರದು. ಒಂದು ವೇಳೆ ತಪ್ಪು ಮಾಡಿದ್ದು ಕಂಡುಬಂದರೆ ತಕ್ಕ ಶಿಕ್ಷೆ ನೀಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಎಲ್ಲರಿಗೂ ತಂದೆ, ತಾಯಿ, ಮಡದಿ, ಮಕ್ಕಳು ಇರುತ್ತಾರೆ ಅವರಿಗೋಸ್ಕರ ರೌಡಿಶೀಟರ್ ಗಳು ಬದಲಾಗಬೇಕು. ಕೆಲವರು ಆಕಸ್ಮಿಕವಾಗಿ, ಪರೋಕ್ಷವಾಗಿ ತಪ್ಪು ಮಾಡಿರಬಹುದು, ಇನ್ನು ಕೆಲವರು ಬೇಕಂತಲೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಅಂತವರ ಮೇಲೆ ನಮ್ಮ ಇಲಾಖೆ ಹೆಚ್ಚಿನ ನಿಗಾವಹಿಸಿ ಮತ್ತಷ್ಟು ಕಾನೂನಿನ ಕ್ರಮ ಕೈಗೊಳ್ಳುತ್ತೇವೆ. ಯಾರೇ ಶಿಫಾರಸ್ಸು ಮಾಡಿದರೂ ರೌಡಿ ಹಾಳೆಯಿಂದ ಹೆಸರು ತೆಗೆಯುವುದಿಲ್ಲ. ರೌಡಿ ಶೀಟರ್ ಓಪನ್ ಮಾಡೋದಕ್ಕೆ ಕೇವಲ ಒಂದು ಗಂಟೆ ಸಾಕು, ಆದರೆ, ರೌಡಿ ಪಟ್ಟಿಯಿಂದ ಹೆಸರು ತೆಗೆಯುವುದಕ್ಕೆ ಹಲವು ವರ್ಷಗಳೇ ಬೇಕಾಗುತ್ತದೆ. ಆದ್ದರಿಂದ ಯಾರೂ ಸಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದರು.
ಯಾವ ಅಪರಾಧದಲ್ಲಿ ಭಾಗಿಯಾಗದೇ ಸನ್ನಡತೆಯಿಂದ ಜೀವನ ಸಾಗಿಸುತ್ತಿರುವ ಹಾಗೂ 60 ವರ್ಷ ಮೇಲ್ಪಟ್ಟವರ ರೌಡಿಶೀಟರ್ ಗಳ ಚಲನವಲನ ಗಮನಿಸಿ ರೌಡಿ ಪಟ್ಟಿಯಿಂದ ಹೆಸರು ತೆಗೆಯಲಾಗುವುದು.
ಕಾನೂನು ಬಾಹಿರ ಚಟುವಟಿಕೆಗಳನ್ನು ಮುಂದುವರಿಸುವುದು ಹಾಗೂ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿದ್ದಕ್ಕೆ ರೌಡಿ ಶೀಟರ್ ಆಗಿದ್ದೀರಿ. ಅದರಿಂದ ಹೊರಬರಬೇಕೆಂದರೆ ಗೌರವಯುತ ಜೀವನ ನಡೆಸಬೇಕು. ಮತ್ತೆ ಅಂಥದ್ದೇ ಕುಮ್ಮಕ್ಕು ಮುಂದುವರಿಸಿದರೆ ಶಿಕ್ಷೆ ಗ್ಯಾರೆಂಟಿ ಎಂದರು.
ನಿರಂತರ ಹತ್ತು ವರ್ಷ ಸಮಾಜದಲ್ಲಿ ಯಾರ ನೆಮ್ಮದಿಗೂ ಧಕ್ಕೆ ತರದಂತೆ ಜೀವನ ನಡೆಸಬೇಕು. ದೂರುಗಳೂ ಬರದಂತೆ ಇರಬೇಕು. ಹಾಗೆ ಮಾಡಿದರೆ ಮಾತ್ರ ರೌಡಿಶೀಟರ್‌ನಿಂದ ತೆರವು ಮಾಡುತ್ತೇವೆ ಎಂದು ಹೇಳಿದರು.
1.ದೊಡ್ಡಬಳ್ಳಾಪುರ ಗ್ರಾಮಾಂತರ- 52
2.ದೊಡ್ಡಬಳ್ಳಾಪುರ ನಗರ- 51
3.ಹೊಸಹಳ್ಳಿ- 10
4.ದೊಡ್ಡಬೆಳವಂಗಲ- 25
5.ವಿಜಯಪುರ- 30
6.ವಿಶ್ವನಾಥಪುರ- 22
7.ಚೆನ್ನರಾಯಪಟ್ಟಣ- 11
8.ರಾಜಾನುಕುಂಟೆ- 47
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕಲ್ಲಪ್ಪ ಶಂಕರಪ್ಪ ಖರಾತ್ ಸೇರಿದಂತೆ ವಿಜಯಪುರ, ವಿಶ್ವನಾಥಪುರ, ಚೆನ್ನರಾಯಪಟ್ಟಣ, ರಾಜಾನುಕುಂಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಳು ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…