ಕೊಲೆ, ಡಕಾಯಿತಿ ನಡೆಸಿದ್ದ ಎಂಟು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಕುಂಟೆ ಗ್ರಾಮದಲ್ಲಿನ ಲಲಿತಮ್ಮ ಎಂಬುವವರ ಮನೆಗೆ 2020ರ ಆಗಸ್ಟ್‌ನಲ್ಲಿ ನುಗ್ಗಿ ತಾಯಿ ಮತ್ತು ತಂಗಿ ಎದುರಲ್ಲೇ ಮಗ ಮಂಜುನಾಥ(23) ಎಂಬಾತನನ್ನು ಭೀಕರವಾಗಿ ಕೊಲೆಗೈದು ಡಕಾಯಿತಿ ನಡೆಸಿದ್ದ ಆರೋಪ ಸಾಬೀತು ಆದ ಹಿನ್ನೆಲೆ ಯಾಸಿರ್ ಅಲ್ಪತ್, ಹೇಮಂತ್, ಸೋನು, ಸೋಮಶೇಖರ್, ಮನೋಜ್ ಕಮಾರ್, ಪ್ರಶಾಂತ್, ವೆಂಕಟೇಶ್ ಮತ್ತು ಅಂಶುಕುಮಾರ್ ಎಂಬುವವರಿಗೆ ದೊಡ್ಡಬಳ್ಳಾಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರಗಪ್ಪ ಏಕಾಬೋಟಿ ಅವರು ವಿಚಾರಣೆ ನಡೆಸಿ ಎಲ್ಲಾ ಎಂಟು ಜನ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಹಾಗೂ ಡಾ. ಎಂ.ಬಿ.ನವೀನ್ ಕಮಾರ್ ಅವರು ಪ್ರತ್ಯಕ್ಷ ಹಾಗೂ ಪೂರಕ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಆಶಾ ಹಾಗೂ ನಟರಾಜ್ ವಾದ ಮಂಡಿಸಿದ್ದರು. ಅತ್ಯಂತ ಗಂಭೀರ ಪ್ರಕರಣವಾಗಿದ್ದರಿಂದ ಇದರ ಕೋರ್ಟ್ ಉಸ್ತುವಾರಿಯನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜು ನಿರ್ವಹಿಸಿದ್ದರು.

ತನಿಖೆಯನ್ನು ನಿರ್ವಹಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ಡಿವೈಎಸ್ಪಿ ರವಿ ಅವರು ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

19 minutes ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

39 minutes ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

11 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

11 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

11 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

15 hours ago