ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಕುಂಟೆ ಗ್ರಾಮದಲ್ಲಿನ ಲಲಿತಮ್ಮ ಎಂಬುವವರ ಮನೆಗೆ 2020ರ ಆಗಸ್ಟ್‌ನಲ್ಲಿ ನುಗ್ಗಿ ತಾಯಿ ಮತ್ತು ತಂಗಿ ಎದುರಲ್ಲೇ ಮಗ ಮಂಜುನಾಥ(23) ಎಂಬಾತನನ್ನು ಭೀಕರವಾಗಿ ಕೊಲೆಗೈದು ಡಕಾಯಿತಿ ನಡೆಸಿದ್ದ ಆರೋಪ ಸಾಬೀತು ಆದ ಹಿನ್ನೆಲೆ ಯಾಸಿರ್ ಅಲ್ಪತ್, ಹೇಮಂತ್, ಸೋನು, ಸೋಮಶೇಖರ್, ಮನೋಜ್ ಕಮಾರ್, ಪ್ರಶಾಂತ್, ವೆಂಕಟೇಶ್ ಮತ್ತು ಅಂಶುಕುಮಾರ್ ಎಂಬುವವರಿಗೆ ದೊಡ್ಡಬಳ್ಳಾಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಮೇಶ್ ದುರಗಪ್ಪ ಏಕಾಬೋಟಿ ಅವರು ವಿಚಾರಣೆ ನಡೆಸಿ ಎಲ್ಲಾ ಎಂಟು ಜನ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.
ಈ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಹಾಗೂ ಡಾ. ಎಂ.ಬಿ.ನವೀನ್ ಕಮಾರ್ ಅವರು ಪ್ರತ್ಯಕ್ಷ ಹಾಗೂ ಪೂರಕ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ತನಿಖೆಯನ್ನು ನಿರ್ವಹಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ಡಿವೈಎಸ್ಪಿ ರವಿ ಅವರು ಅಭಿನಂದಿಸಿದ್ದಾರೆ.
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…