ಕೊಲೆ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಘಟನೆ ಸಾರಾಂಶ
ದೊಡ್ಡಬೆಳವಂಗಲ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ: 111/2020 ಐ.ಪಿ.ಸಿ ಕಲಂ 396 (ಡಕಾಯಿತಿ ಮತ್ತು ಕೊಲೆ) ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಂಡ ದಿನಾಂಕ: 10.09.2020 ರಂದು ಸಂಜೆ 5.55 ಗಂಟೆಯಲ್ಲಿ ಆರೋಪಿಗಳಾದ ಹೇಮಂತ್ ಕುಮಾರ್ ಹಾಗೂ ಸೋನು ರವರುಗಳು ಕೆಎ-03-ಎಂಸಿ-6915 ಚವರ್ಲೆಟ್ ಕಾರಿನಲ್ಲಿ ದೊಡ್ಡಬಳ್ಳಾಪುರ-ಡಾಬಸ್ ಪೇಟೆ ಮೂಲಕ ತುಮಕೂರು ಕಡೆಗೆ ಹೋಗುತ್ತಿರುತ್ತಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸರ್ಕಾರಿ ವಾಹನಗಳಲ್ಲಿ ಕೊಡಿಗೇಹಳ್ಳಿ ಕಡೆಯಿಂದ ಆರೋಪಿಗಳನ್ನು ಹಿಂಬಾಲಿಸಿಕೊಂಡು ಬಂದು ಕೆಸ್ತೂರು ಗ್ರಾಮದ ಬಳಿ ಬಂಡಿಜಾಡು ರಸ್ತೆಯಲ್ಲಿ ಆರೋಪಿಗಳ ಕಾರನ್ನು ಅಡ್ಡ ಹಾಕಿ ದಸ್ತಗಿರಿ ಮಾಡಲು ಹೋದಾಗ ಇಬ್ಬರೂ ಆರೋಪಿತರುಗಳು ಕೈಗಳಲ್ಲಿ ಚಾಕುಗಳನ್ನು ಹಿಡಿದುಕೊಂಡು ಬಂದು ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಿಡಿದುಕೊಳ್ಳಲು ಹೋದ ಪೊಲೀಸರಿಗೆ ಚಾಕುವಿನಿಂದ ಚುಚ್ಚಿ ಹಲ್ಲೆಮಾಡಿ ರಕ್ತಗಾಯಗೊಳಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದ ಸಂಬಂಧ ಸದರಿ ಆರೋಪಿಗಳ ವಿರುದ್ಧ ಅಂದಿನ ತನಿಖಾಧಿಕಾರಿಗಳಾಗಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್ ಎ.ವಿ ರವರು ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.
ಸದರಿ ಪ್ರಕರಣವು ಘನ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಪೀಠಾಸೀನ ದೊಡ್ಡಬಳ್ಳಾಪುರದಲ್ಲಿ ಎಸ್.ಸಿ.ನಂ:10003/2021 ರಂತೆ ವಿಚಾರಣೆ ನಡೆದಿದ್ದು, ಸದರಿ ಪ್ರಕರಣದಲ್ಲಿ ಆರೋಪಿತರು ಅಪರಾಧ ಎಸಗಿರುವುದು ಸಾಭೀತಾದ ಹಿನ್ನೆಲೆಯಲ್ಲಿ ಘನ ನ್ಯಾಯಾಧೀಶರಾದ ನಿರ್ಮಲ. ಕೆ ರವರು ದಿನಾಂಕ:23.03.2026 ರಂದು ಪ್ರಕರಣದ ಇಬ್ಬರೂ ಆರೋಪಿತರಿಗೆ ಐ.ಪಿ.ಸಿ ಕಲಂ;307 ರ ಅಪರಾಧಕ್ಕಾಗಿ 10 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ತಲಾ 10,000/- ರೂ ದಂಡ, ಐ.ಪಿ.ಸಿ ಕಲಂ;332 ರ ಅಪರಾಧಕ್ಕಾಗಿ 3 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ ತಲಾ 5,000/- ರೂ ದಂಡ ಮತ್ತು ಐ.ಪಿ.ಸಿ ಕಲಂ; 353 ಅಪರಾಧಕ್ಕಾಗಿ 2 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ. ಸರ್ಕಾರದ ಪರವಾಗಿ ಅಭಿಯೋಜನೆ ಇಲಾಖೆ ವತಿಯಿಂದ ಸರ್ಕಾರಿ ಅಭಿಯೋಜಕರಾದ. ಟಿ.ಎನ್ ನಟರಾಜ ರವರು ವಾದ ಮಂಡಿಸಿದ್ದರು.
ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಗಸ್ತಿನಲ್ಲಿದ್ದ ಇಬ್ಬರು 112 ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ತಲುಪಿ ರಕ್ಷಣೆ ಮಾಡಿರುವಂತಹ…
ರಾಮಮೂರ್ತಿ ನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಡಿ.ರಾಜ(46) ಬಂಧಿಸಿ, ಆತನಿಂದ 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣ…
ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ…
ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…
ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…