ಕೊಲೆ ಮಾಡಿ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿಯ ಮೃತದೇಹವು ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆಯ ಮಾಣಿಕ್ಯನಹಳ್ಳಿಯ ವೆಂಕಟೇಶ್ ಮಗಳಾದ ದೀಪಿಕಾ(28), ಕೊಲೆಯಾಗಿರುವ ಅತಿಥಿ ಶಿಕ್ಷಕಿ.
ಮಾಣಿಕ್ಯನಹಳ್ಳಿ ಗ್ರಾಮದ ಲೋಕೇಶ್ ಎಂಬಾತನಿಗೆ ದೀಪಿಕಾಳನ್ನ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ 8 ವರ್ಷದ ಮಗು ಸಹ ಇದೆ. ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದರು.
ಕಳೆದ ಶನಿವಾರ ಮಧ್ಯಾಹ್ನ ತರಗತಿ ಮುಗಿಸಿ ಬೈಕ್ ನಲ್ಲಿ ವಾಪಸ್ ಮನೆಗೆ ಹೋಗಿದ್ದರು. ಶನಿವಾರ ಸಂಜೆ ವೇಳೆ ಸ್ಕೂಟರ್ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇರುವುದನ್ನ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಅಂದು ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಅದರ ನಂಬರ್ ನೆರವಿನಿಂದ ಶಿಕ್ಷಕಿಯ ಊರು ಪತ್ತೆ ಹಚ್ಚಿದ್ದರು.
ಇನ್ನಷ್ಟು ಪರಿಶೀಲನೆ ನಡೆಸಿದ ಪೊಲೀಸರು, ಬೆಟ್ಟದ ತಪ್ಪಲಿನಲ್ಲೇ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಶಿಕ್ಷಕಿಯ ಶವ ಪತ್ತೆಯಾಗಿದೆ.
ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…