ದೊಡ್ಡಬಳ್ಳಾಪುರ: ನಗರದಿಂದ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಲು ಎಸ್‌ಟಿಪಿ (STP) ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹೋರಾಟ ಸಮಿತಿ ವತಿಯಿಂದ ಆಗಸ್ಟ್ 15ರಂದು ನಗರದ ಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಮುಖ ಸತೀಶ್, ದೊಡ್ಡತುಮಕೂರು ಹಾಗೂ ಮಜರಾ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರು ಸಂಪೂರ್ಣ ಕಲುಷಿತಗೊಂಡಿದ್ದು, ಸಮಸ್ಯೆ ಪರಿಹಾರಕ್ಕಾಗಿ ಕಳೆದ ನಾಲ್ಕೈದು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂದು ಆರೋಪಿಸಿದರು.
ಹಿಂದಿನ ಹೋರಾಟದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಭೆ ನಡೆಸಿ, ಹೋರಾಟ ಕೈಬಿಡುವಂತೆ ಮನವಿ ಮಾಡಲಾಗಿತ್ತು. ಎರಡು ದಿನಗಳಲ್ಲಿ ಸಮಸ್ಯೆ ಪರಿಹರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ ಆರು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಆರಂಭವಾಗಿಲ್ಲ. ಹೀಗಾಗಿ ಹೋರಾಟದ ಮುಂದುವರಿದ ಭಾಗವಾಗಿ ಆ.15ರಂದು ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ವೇದಿಕೆಯ ಮುಖಂಡ ವಸಂತ್ ಕುಮಾರ್ ಮಾತನಾಡಿ, ನಗರದಿಂದ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಲು ಎಸ್‌ಟಿಪಿ ಘಟಕ ಸ್ಥಾಪಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಆದರೆ ಈವರೆಗೂ ಘಟಕ ಸ್ಥಾಪನೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೋರಾಟ ಮುಂದುವರಿಕೆ: ಎಸ್‌ಟಿಪಿ ಘಟಕ ಸ್ಥಾಪನೆಯಾಗುವವರೆಗೂ ಹೋರಾಟ ನಿರಂತರವಾಗಿ ಮುಂದುವರಿಯಲಿದೆ. ಹೋರಾಟ ಜೀವಂತವಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಸರ್ಕಾರ ಮತ್ತು ಅಧಿಕಾರಿಗಳ ಗಮನ ಸೆಳೆಯುವ ಉದ್ದೇಶದಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಅರ್ಕಾವತಿ ನದಿ ಪಾತ್ರ ಸಂರಕ್ಷಣಾ ಹೋರಾಟ ಸಮಿತಿಯ ಪ್ರಮುಖರಾದ ಕಾಳೇಗೌಡ, ಅಂಜನ್ ಮೂರ್ತಿ, ರಾಮಕೃಷ್ಣಪ್ಪ, ಅಂಜಿನಪ್ಪ, ಸುವಂತಪ್ಪ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…