ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ ನಡೆದಿದೆ.

ಕನ್ನಮಂಗಲ ಗ್ರಾಮದ ಸಮೀಪದ ಪಾಳುಬಿದ್ದ ಕೋಳಿ ಫಾರಂ ಬಳಿ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಯಸ್ಸು ಸುಮಾರು 35 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಮೃತನ ಹೆಸರು, ವಿಳಾಸ ಸೇರಿದಂತೆ ಯಾವುದೇ ಗುರುತು ಸದ್ಯಕ್ಕೆ ಪತ್ತೆಯಾಗಿಲ್ಲ.

ಮೃತನ ಕೈಯಲ್ಲಿ ಸ್ಟೀಲ್ ಬಳೆ ಇದ್ದು, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ. ಶವ ಕೊಳೆತ ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಕ್ರಮ ಕೈಗೊಳ್ಳಲಾಗುತ್ತಿದ್ದು, ಮೃತನ ಗುರುತು ಹಾಗೂ ಸಾವಿನ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

6 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

17 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

19 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

19 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

19 hours ago

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

21 hours ago