ಬೆಂಗಳೂರು: ಮೂರು ವರ್ಷಗಳ ಬಳಿಕ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನುಭವಿ ಆಟಗಾರ ವಿರಾಟ್ ಕೊಹ್ಲಿ ಹಾಗೂ ನಾಯಕ ಪಾಫ್ ಡುಪ್ಲೆಸಿ ಅವರ ಶತಕದ ಜೊತೆಯಾಟದಿಂದ ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಪಡೆಯಿತು.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಬೆಂಗಳೂರು ತಂಡದ ನಾಯಕ ಪಾಫ್ ಡುಪ್ಲೆಸಿ ಮುಂಬೈ ಇಂಡಿಯನ್ಸ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆದರೆ ಶಿಸ್ತು ಬದ್ಧ ಬೌಲಿಂಗ್ ನಡೆಸಿದ ಆರ್ ಸಿಬಿ ಎದುರು ಬಲಿಷ್ಠ ಮುಂಬೈ ತಂಡದ ಬ್ಯಾಟಿಂಗ್ ಪಡೆ ಮಂಕಾಗಿತ್ತು.
20 ರನ್ ಗಳಿಸಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದವರು ಮದ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗಳಾದ ಸೂರ್ಯ ಕುಮಾರ್ ಯಾದವ್ (15) ಹಾಗೂ ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ (84) ರನ್ ಗಳಿಸಿ ತಂಡದ ಮೊತ್ತವನ್ನು 170 ರ ಗಡಿ ದಾಟಿಸಿದರು.
172 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡಕ್ಕೆ ಈ ಮೊತ್ತ ಸವಾಲು ಎನಿಸಲಿಲ್ಲ, ಛೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ (82) ಹಾಗೂ ನಾಯಕ ಪಾಫ್ ಡುಪ್ಲೆಸಿ (73) ಮೊದಲ ವಿಕೆಟ್ ಜೊತೆಯಾಟಕ್ಕೆ 143 ರನ್ ಗಳಿಸಿದರು, ನಂತರ ಬಂದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (0) ನಿರಾಸೆ ಮೂಡಿಸಿದರು.
ವಿರಾಟ್ ಕೊಹ್ಲಿ ಜೊತೆಯಾದ ಮ್ಯಾಕ್ಸ್ ವೆಲ್ (12) ಗೆಲುವಿನ ದಡ ಸೇರಿಸಿದರು, ಮುಂಬೈ ತಂಡದ ಎಲ್ಲಾ ಬೌಲರ್‌ಗಳು ದುಬಾರಿಯಾದರು, ಉತ್ತಮ ಪ್ರದರ್ಶನ ತೋರಿದ ನಾಯಕ ಪಾಫ್ ಡುಪ್ಲೆಸಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…