ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ (ಕೋಚಿಮುಲ್) ಒಕ್ಕೂಟದ ಸರಕಾರದ ಅಧಿಕಾರೇತರ ಸದಸ್ಯನಾಗಿ ಪ್ರಶಾಂತ್ ನಗರದ ನಿವಾಸಿ ಯೂಸುಫ್ ಶರೀಫ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉಪನಿಬಂಧನೆಗೊಳಪಟ್ಟು ಆಡಳಿತಾತ್ಮಕ ಹಿತದೃಷ್ಟಿಯಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಸರಕಾರದ ಮುಂದಿನ ಆದೇಶದ ವರೆಗೆ ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ.