ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.
ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ, ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ 12 ಕ್ಕೆ ಮುಕ್ತಾಯವಾಗಿದೆ. ಆದರೂ, ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ. ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಧಿಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.
ಕೋಚಿಮುಲ್ ಆಡಳಿತ ಮಂಡಳಿಯನ್ನು ವಜಾ ಮಾಡಿ ಕೂಡಲೇ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಕಳೆದ ಜುಲೈ 07 ರಂದು ಹೈಕೋರ್ಟ್ ಆದೇಶ ನೀಡಿದ್ದಾರೆ ಹಿಂದೆ ರಿಟರ್ನಿಂಗ್ ಅಧಿಕಾರಿಯಿಂದ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಾ.21ಕ್ಕೆ ಸ್ಥಗಿತಗೊಂಡಿದೆ. ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಬೇಕು ಎಂಬುದನ್ನು ಸೂಚಿಸಿದ್ದರು ಇದುವರೆಗೂ ಚುನಾವಣೆಗೆ ಸಂಬಂಧಿಸಿದ ಸಣ್ಣ ಪ್ರಯತ್ನವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಲ್ಲ ಎಂದರು.
ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು. ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ. ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ. ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನಿಯಪ್ಪ ಮಾತನಾಡಿ ಬಾಗೇಪಲ್ಲಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಟವನ್ನು ಪ್ರತ್ಯೇಕ ಮಾಡಲು ಅಂಗೀಕಾರವಾಗಿದೆ ಕೂಡಲೇ ಆಡಳಿತ ಮಂಡಳಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಜಾರಿ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಸದರು, ಶಾಸಕರ ನೇತೃತ್ವದಲ್ಲಿ ಹಾಲು ಉತ್ಪಾದಕರು ಉಗ್ರವಾದ ಹೋರಾಟಕ್ಕೆ ಹೋಗಬೇಕಾಗುತ್ತದೆ ಕೂಡಲೇ ಆದೇಶವನ್ನು ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…