Categories: ಕೋಲಾರ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿಯಾಗಿದೆ ಎಂದು ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ, ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ 12 ಕ್ಕೆ ಮುಕ್ತಾಯವಾಗಿದೆ. ಆದರೂ, ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ. ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಧಿಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

ಕೋಚಿಮುಲ್ ಆಡಳಿತ ಮಂಡಳಿಯನ್ನು ವಜಾ ಮಾಡಿ ಕೂಡಲೇ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಕಳೆದ ಜುಲೈ 07 ರಂದು ಹೈಕೋರ್ಟ್ ಆದೇಶ ನೀಡಿದ್ದಾರೆ ಹಿಂದೆ ರಿಟರ್ನಿಂಗ್ ಅಧಿಕಾರಿಯಿಂದ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಾ.21ಕ್ಕೆ ಸ್ಥಗಿತಗೊಂಡಿದೆ. ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಬೇಕು ಎಂಬುದನ್ನು ಸೂಚಿಸಿದ್ದರು ಇದುವರೆಗೂ ಚುನಾವಣೆಗೆ ಸಂಬಂಧಿಸಿದ ಸಣ್ಣ ಪ್ರಯತ್ನವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು. ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ. ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ. ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಮುನಿಯಪ್ಪ ಮಾತನಾಡಿ ಬಾಗೇಪಲ್ಲಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಟವನ್ನು ಪ್ರತ್ಯೇಕ ಮಾಡಲು ಅಂಗೀಕಾರವಾಗಿದೆ ಕೂಡಲೇ ಆಡಳಿತ ಮಂಡಳಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಜಾರಿ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಸದರು, ಶಾಸಕರ ನೇತೃತ್ವದಲ್ಲಿ ಹಾಲು ಉತ್ಪಾದಕರು ಉಗ್ರವಾದ ಹೋರಾಟಕ್ಕೆ ಹೋಗಬೇಕಾಗುತ್ತದೆ ಕೂಡಲೇ ಆದೇಶವನ್ನು ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

35 minutes ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

3 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

18 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

21 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

24 hours ago