ಕೋಟಿ ವೃಕ್ಷ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಚಾಲನೆ

ಅರಣ್ಯ ಇಲಾಖೆಯ ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಜುಲೈ 01 ರಿಂದ 07 ರವರೆಗೆ ನಡೆಯಲಿರುವ ಕೋಟಿ ವೃಕ್ಷ ಆಂದೋಲನಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಕೀರ್ಣ ಕಟ್ಟಡದ ಆವರಣದಲ್ಲಿ ಇಂದು ಗಿಡ ನೆಟ್ಟು, ನೀರೆರೆಯುವ ಮೂಲಕ ಚಾಲನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್‌ ನೇಗಿ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್‌ಕುಮಾರ್ ಸುಭಾಷ್ ರಾವ್ ಪಾಟೀಲ್, ಸಾಮಾಜಿಕ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ್ ಭಟ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *