
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದು ಅಧಿಕೃತ ಪ್ರವೇಶ ನಿಷೇಧ ಎಂದು ನಾಮಫಲಕ ಅಳವಡಿಸಲಾಗಿದೆ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿತ್ತು. ಒತ್ತುವರಿ ತೆರವು ಮಾಡುವಂತೆ ತೂಬಗೆರೆ ಹೋಬಳಿ ವಾಲ್ಮೀಕಿ ಸಂಘದ ಅಧ್ಯಕ್ಷ ಕೃಷ್ಣ ಅವರು ಕಂದಾಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಒತ್ತುವರಿಯಾಗಿದ್ದ ಸುಮಾರು ನಾಲ್ಕು ಕೋಟಿ ರೂ. ಮೌಲ್ಯದ ಸುಮಾರು 1 ಎಕರೆ ಭೂಮಿಯನ್ನು ವಶಕ್ಕೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದು ಅಧಿಕೃತ ಪ್ರವೇಶ ನಿಷೇಧ ಎಂದು ನಾಮಫಲಕ ಅಳವಡಿಸಲಾಗಿದೆ…
ರಾಜಶೇಖರ್ ಲಂಬಾಣಿ ಹಾಗೂ ರಾಮಾಂಜಿನಪ್ಪ, ರಾಜಣ್ಣ, ರಮೇಶ್, ಅನಿಲ್ ಈರದಿಮ್ಮಪ್ಪ ಇದ್ದರು.