ಕೊಡಗಿನ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಕೇರಳದ ತಿರುವನಂತಪುರದಿಂದ ಅಕ್ರಮವಾಗಿ ಹಲವು ಕೋಟಿ ಬೆಳೆಬಾಳುವ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ದೊರಕಿದ ನಂತರ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ ತಂಡ ಏಪ್ರಿಲ್ 10 ರಂದು ಬೆಟೋಳಿ ಗ್ರಾಮದ ಹೆಗ್ಗಳ ಜಂಕ್ಷನ್ ಬಳಿ ದಾಳಿ ನಡೆಸಿ ಅಕ್ರಮವಾಗಿ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಕೇರಳ ಮೂಲದ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಿಕೊಂಡು ಕ್ರಮ ಕೈಗೊಂಡಿದ್ದಾರೆ. 10 ಮಂದಿ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಇನೋವಾ ಕ್ರಿಸ್ಟ, ಮಾರುತಿ ಶಿಫ್ಟ್, ಎರಡು ನೋಟು ಎಣಿಸುವ ಯಂತ್ರಗಳು, ಹಾಗೂ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ ) ಅನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್. ಡಿಎಸ್ಪಿ ವಿರಾಜಪೇಟೆ ಉಪವಿಭಾಗ, ಅನೂಪ್ ಮಾದಪ್ರ.ಪಿ, ಸಿಪಿಐ, ವಿರಾಜಪೇಟೆ ವೃತ್ತ, ಪ್ರಮೋದ್.ಹೆಚ್.ಎಸ್. ಪಿಎಸ್‌ಐ, ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಠಾಣಾ ಸಿಬ್ಬಂದಿಗಳು ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…