
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು 11:30ರಲ್ಲಿ ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ…

ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಠಾಣಾ ವ್ಯಾಪ್ತಿಯ ನಾಮಗೊಂಡ್ಲು ಗ್ರಾಮದ ನಾಗೇಶ್ (29) ಸ್ಥಳದಲ್ಲೇ ಸಾವು, ಮಂಡ್ಯ ಜಿಲ್ಲೆಯ ಪಾಂಡುಪುರ ತಾಲೂಕಿನ ಅರಳುಗುಪ್ಪೆ ಗ್ರಾಮದ ಮನೋಜ್ (24) ಆಸ್ಪತ್ರೆಯಲ್ಲಿ ಸಾವು.

ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾರೆ.
ರಸ್ತೆ ಬದಿಯಲ್ಲಿ ನಗರಸಭೆ ಬೀದಿ ದೀಪಗಳ ಕೊರತೆ ಕೂಡ ಎದ್ದು ಕಾಣುತ್ತಿದ್ದು, ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪ ಅಳವಡಿಸಿ ಸೂಕ್ತ ಬೆಳಕಿನ ವ್ಯವಸ್ಥೆ ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ..

ಮೃತರಿಬ್ಬರು ಸ್ನೇಹಿತರಾಗಿದ್ದು, ನಗರದ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ…
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…