Categories: ಕೋಲಾರ

ಕೋಲಾರದಲ್ಲಿ ಪವಿತ್ರ ರಂಜಾನ್‌ ಸಂಭ್ರಮದಿಂದ ಆಚರಣೆ

ಕೋಲಾರ: ಮುಸಲ್ಮಾನರ ಪವಿತ್ರ ರಂಜಾನ್‌ ಹಬ್ಬವನ್ನು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಭ್ರಮದಿಂದ ಶನಿವಾರ ಆಚರಣೆ ಮಾಡಲಾಯಿತು.

ನಗರದ ಈದ್ಗಾ ಮೈದಾನ ಹಾಗೂ ಚಿಕ್ಕಬಳ್ಳಾಪುರ ರಸ್ತೆಯ ಸಂಗೊಂಡಹಳ್ಳಿ ಬಳಿಯ ದರ್ಗಾ ಸಮೀಪ ಆಯೋಜಿಸಿದ್ದ ವಿಶೇಷ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಆಹಮದ್, ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು

ಹಬ್ಬದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದಲೂ ಸಿದ್ಧತೆಗಳು ಜೋರಾಗಿ ನಡೆದಿದ್ದವು. ದರ್ಗಾಗಳಿಗೆ ದೀಪಾಲಂಕಾರಗಳನ್ನು ಮಾಡಲಾಗಿತ್ತು. ಹೊಸ ಬಟ್ಟೆಗಳನ್ನು ತೊಟ್ಟು ಕುಟುಂಬ ಸಮೇತರಾಗಿ ಪ್ರಾರ್ಥನೆಗಳಿಗೆ ಆಗಮಿಸಿದ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಣೆಯಲ್ಲಿ ತೊಡಗಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಪ್ರಾರ್ಥನೆಯಲ್ಲಿ ಉತ್ತಮ ಮಳೆ, ಬೆಳೆಗಾಗಿ ಅಲ್ಲಾಹುವಿನಲ್ಲಿ ಬೇಡಿಕೊಳ್ಳಲಾಯಿತು. ಪ್ರಾರ್ಥನೆ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದುದು ಸಾಮಾನ್ಯವಾಗಿತ್ತು. ಅಂತೆಯೇ ಬಡವರಿಗೆ ಹಣ ಸೇರಿದಂತೆ ಇನ್ನಿತರೆ ವಸ್ತುಗಳನ್ನು ದಾನವಾಗಿ ನೀಡಲಾಯಿತು.

ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆಗೆ ವ್ಯವಸ್ಥೆ ಕಲ್ಪಿಸಿದ್ದು, ಪ್ರತಿ ವರ್ಷದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರಿಂದಾಗಿ ಪೊಲೀಸ್‌ ಇಲಾಖೆಯಿಂದ ಬಂದೋಬಸ್ತ್‌ ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಕ್ಲಾಕ್‌ ಟವರ್‌ನಿಂದ ಬೈಪಾಸ್‌ವರೆಗಿನ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ, ಟೇಕಲ್‌ ಮಾರ್ಗದಲ್ಲಿ ಸಾಗಲು ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ ಶಾಂತಿಯುತವಾಗಿ ಹಬ್ಬ ಆಚರಣೆಗೊಂಡಿತು.

ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು, ಸಮಿತಿ ಪದಾಧಿಕಾರಿಗಳು, ಸೇರಿದಂತೆ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಆಫ್ಸರ್, ಮೈಲಾಂಡಹಳ್ಳಿ ಮುರಳಿ, ಅಬ್ದುಲ್ ಖಯ್ಯಾಮ್, ಸಾಧಿಕ್, ಫೈರೋಜ್ ಖಾನ್, ಏಜಾಜ್, ಶಫಿ, ಕುರಿಗಳ ರಮೇಶ್, ನೂರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

12 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

12 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

17 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago