Categories: ಕೋಲಾರ

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು ಇದಕ್ಕೆ ಕಡಿವಾಣಕ್ಕೆ ವಿಶೇಷ ಕಾನೂನು ರೂಪಿಸಿ ಕೋಳಿ ಸಾಕಾಣಿಕೆದಾರ ರೈತರ ರಕ್ಷಣೆಗೆ ಮುಂದಾಗಲಿ ಎಂದು ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಟಿ.ಯಶವಂತ್ ಒತ್ತಾಯಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾರ್ಪೊರೇಟ್ ಕೃಷಿಯಲ್ಲಿ ಕೋಳಿಯು ಒಂದು ಭಾಗವಾಗಿಬಿಟ್ಟಿದೆ ದಿನನಿತ್ಯ ಕಂಪನಿಗಳಿಂದ ಶೋಷಣೆ ದಬ್ಬಾಳಿಕೆ ನಡೆಯುತ್ತಿದೆ ಇದರ ವಿರುದ್ದ ಸಹಕಾರಿ ಚಳುವಳಿಯ ಮೂಲಕ ಪ್ರತಿರೋಧ ತೋರಬೇಕಾಗಿದೆ ಪ್ರತಿಯೊಬ್ಬ ಸದಸ್ಯರು ಒಗ್ಗಟ್ಟನ್ನು ಪ್ರದರ್ಶಿಸಿ ಸಹಕಾರಿ ವ್ಯವಸ್ಥೆಯನ್ನು ಉಳಿಸಬೇಕಾಗಿದೆ ಎಂದರು.

ಕೋಳಿ ಸಾಕಾಣಿಕೆದಾರರು ಯಾವುದೇ ಸಹಕಾರಿ ಸಂಸ್ಥೆಯ ಮೂಲಕ ಸಾಲ ಸೌಲಭ್ಯಗಳನ್ನು ಪಡೆದು ಸಕಾಲದಲ್ಲಿ ಮರುಪಾವತಿ ಮಾಡಬೇಕು ಸಹಕಾರಿ ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕು ಕೋಳಿ‌ ಉತ್ಪಾದಕ ರೈತರ ಕಷ್ಟ ಸುಖದಲ್ಲಿ ಸರ್ಕಾರಗಳು ಭಾಗಿಯಾಗಬೇಕು ಮುಂಬರುವ ಬಜೆಟ್ ನಲ್ಲಿ ಸಹಕಾರಿ ಸಂಸ್ಥೆಗಳ ಉಳಿವಿಗಾಗಿ ವಿಶೇಷವಾದ ಕ್ರಮ ವಹಿಸಲು ಮುಂದಾಗಬೇಕು ಎಂದು ತಿಳಿಸಿದರು.

ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಕೋಳಿ ಸಾಕಾಣಿಕೆ ಉದ್ಯಮವಲ್ಲ ರೈತರು ತಮ್ಮ ಜೀವನೋಪಾಯಕ್ಕಾಗಿ ಕಟ್ಟಿಕೊಂಡಿದ್ದಾರೆ ಅವರಿಗೆ ಬದುಕು ಕಟ್ಟಿಕೊಳ್ಳಲು ಸರ್ಕಾರಗಳು ಅವಕಾಶ ನೀಡಬೇಕಾಗಿದೆ ಉತ್ಪಾದನೆಯ ಬೇಡಿಕೆ ಹೆಚ್ಚಾಗಿದೆ ಅದರ ಅನುಗುಣವಾಗಿ ಉತ್ಪಾದನಾ ಖರ್ಚು ವೆಚ್ಚಗಳ ಬಗ್ಗೆ ಗಮನ ಹರಿಸಬೇಕಾಗಿದೆ ಜೊತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆಗಳನ್ನು ಅಲಿಸಿ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು,

ಸಂಘದ ಉಪಾಧ್ಯಕ್ಷ ಗೋಪಾಲ್ ಕಾರ್ಯಕ್ರಮ ಕುರಿತಂತೆ ಪ್ರಸ್ತಾವಿಕವಾಗಿ ಮಾತನಾಡಿ ರೈತರನ್ನು ಕೋಳಿ ಸಾಕಾಣಿಕೆ ಕಂಪನಿಗಳ ಹಿಡಿತದಿಂದ ರಕ್ಷಣೆ ಮಾಡಬೇಕು, ಸ್ಥಳೀಯವಾಗಿಯೇ ಆಹಾರ ಘಟಕ ಸೇರಿದಂತೆ ಔಷಧೀಗಳ ಮಳಿಗೆಗಳನ್ನು ಪ್ರಾರಂಭ ಮಾಡಲು ಸರ್ಕಾರವು ಕ್ರಮ ವಹಿಸುವಂತೆ ಒತ್ತಾಯಿಸಿದರು,

ಇದೇ ಸಂದರ್ಭದಲ್ಲಿಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ಹಾಗೂ 10 ಜನ ಕೋಳಿ ಸಾಕಾಣಿಕೆ ರೈತರಿಗೆ 50 ಸಾವಿರದಂತೆ ಸಾಲವನ್ನು ನೀಡಲಾಯಿತು ಸಂಘದ ನಿರ್ದೇಶಕ ಸುಗಟೂರು ಶ್ರೀಧರ್ ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ಹೋರಾಟಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಎನ್ ಮುನಿವೆಂಕಟೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಕೋಳಿ ಸಾಕಾಣಿಕೆ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ವೆಂಕಟರೆಡ್ಡಿ, ಕೆ.ಪಿ.ಆರ್ ಎಸ್ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್, ಕಸಬಾ ಸೊಸೈಟಿ ಅಧ್ಯಕ್ಷ ದಿಂಬ ನಾಗರಾಜಗೌಡ, ನಿರ್ದೇಶಕ ಶ್ರೀರಾಮರೆಡ್ಡಿ, ಸಂಘದ ಕಾರ್ಯದರ್ಶಿ ರಕ್ಷಿತಾ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

6 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

12 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

13 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

19 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

19 hours ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago