ಕೋಲಾರ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಿಂದ ಸಿಎಲ್-7 ಮಳಿಗೆಯ ಅನುಮತಿ ಪಡೆಯಲು ಕನಿಷ್ಠ 80 ರಿಂದ 85 ಲಕ್ಷಗಳ ರೂಪಾಯಿಗಳ ಪ್ಯಾಕೇಜ್ ನೀಡಬೇಕಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅಬಕಾರಿ ಇಲಾಖೆಯ ವಿರುದ್ದ ಗಂಭೀರ ಆರೋಪ ಮಾಡಿದರು.
ಗುರುವಾರ ವಿಧಾನ ಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿ 2000 ದಿಂದ 2019 ರವರೆಗಿನ 19 ವರ್ಷಗಳ ಅವಧಿಯಲ್ಲಿ 41 ಸಿಎಲ್-2, ಸಿಎಲ್- ಮದ್ಯದ ಮಳಿಗೆಗಳಿಗೆ ಅನುಮತಿ ನೀಡಲಾಗಿತ್ತು ಆದರೆ 2021 ರಿಂದ 2023 ರವರೆಗಿನ ಮೂರು ವರ್ಷಗಳ ಅವಧಿಗೆ ಸುಮಾರು 64 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಪರೋಕ್ಷವಾಗಿ ಸರಕಾರದ ಸದುಉದ್ದೇಶವನ್ನು ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಅಬಕಾರಿ ಇಲಾಖೆಯಿಂದ ಯಾವುದೇ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿಲ್ಲ ಒಂದು ಮಳಿಗೆ ಪ್ರಾರಂಭಿಸಲು ನಗರ ಪ್ರದೇಶದಲ್ಲಿ 5.75 ಲಕ್ಷ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 4.60 ಲಕ್ಷವನ್ನು ಸರಕಾರವೇ ನಿಗಧಿ ಪಡಿಸಲಾಗಿದೆ. ಆದರೆ ರಾಜಾರೋಷವಾಗಿ ಪ್ಯಾಕೇಜ್ ರೂಪದಲ್ಲಿ 80 ರಿಂದ 85 ಲಕ್ಷವನ್ನು ಒಂದು ಮಳಿಗೆ ಪ್ರಾರಂಭಿಸಲು ವಸೂಲಿ ಮಾಡುತ್ತಾರೆ. ಜೊತೆಗೆ ನವೀಕರಣಕ್ಕೆ ಪ್ರತ್ಯೇಕವಾಗಿ ಒಂದು ಲಕ್ಷ ಕೊಡಬೇಕಾಗಿದೆ ಇದರೊಂದಿಗೆ ಪ್ರತಿ ತಾಲೂಕಿನಲ್ಲೂ ತಿಂಗಳ ಮಾಮೂಲಿಯನ್ನು ಕೊಡಬೇಕಾಗಿದೆ ಕೋಲಾರದಲ್ಲಿ 15 ಸಾವಿರ, ಶ್ರೀನಿವಾಸಪುರ 18, ಮುಳಬಾಗಿಲು 22, ಮಾಲೂರು 28, ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕಿನಲ್ಲಿ 30 ಸಾವಿರವನ್ನು ಪ್ರತಿ ಮಳಿಗೆಯಿಂದ ನೀಡಬೇಕಾಗಿದೆ ಎಂದು ಆರೋಪಿಸಿದರು.
ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಸರ್ಕಾರದೊಂದಿಗೆ ಅಧಿವೇಶನದಲ್ಲಿ ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರೂ ಯಾವುದೇ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿಲ್ಲ. ಗ್ರಾಮೀಣ ಪ್ರದೇಶಗಳ ಹಳ್ಳಿಗಳಲ್ಲಿನ ಸಣ್ಣ ಸಣ್ಣ ಅಂಗಡಿಗಳಲ್ಲಿ ಸಹ ಮದ್ಯ ಮಾರಾಟವಾಗುತ್ತಿದ್ದು ಅನುಮತಿ ಪಡೆದು ಕಳ್ಳರ ರೀತಿಯಲ್ಲಿ ಮಾರಾಟ ಮಾಡಿ ಯುವಕರು ದಾರಿ ತಪ್ಪುವಂತೆ ಮಾಡಿದ್ದಾರೆ. ಹಣ ಮಾಡುವ ಉದ್ದೇಶದಿಂದ ಜಿಲ್ಲೆಯ ವಾತಾವರಣವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಳು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಅನಿಲ್ ಕುಮಾರ್ ಆರೋಪಿಸಿದರು.
ಎಂಎಲ್ ಸಿ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅಬಕಾರಿ ಸಚಿವರು ಸಿಎಲ್ 7ಗೆ ಅನುಮತಿ ಕೊಡಿಸಲು ಪ್ಯಾಕೇಜ್ ಮತ್ತು ತಾಲೂಕುವಾರು ತಿಂಗಳಿಗೆ ಮಾಮೂಲಿ ಫಿಕ್ಸ್ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಅದಕ್ಕೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ.ಸಾಕ್ಷಿ ಕೊಟ್ಟರೆ ಸಂಬಂಧಪಟ್ಡ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.
ಸಚಿವರ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅನಿಲ್ ಕುಮಾರ್ ನಾನು ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಸದನದಲ್ಲಿ ಗಂಭೀರ ಆರೋಪ ಮಾಡುತ್ತಿದ್ದೇನೆ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ನಾನು ಮಾಡುತ್ತಿಲ್ಲ. ಸ್ಪಷ್ಟವಾಗಿ ಮಾಹಿತಿ ತೆಗೆದುಕೊಂಡು ಮಾತನಾಡುತ್ತಿದ್ದೇನೆ ಎಂದು ಹೇಳಿದರು.
ಕೋಲಾರ ಅಬಕಾರಿ ಇಲಾಖೆಯಲ್ಲಿನ ಎಫ್.ಡಿ.ಸಿಯಾಗಿರುವ ಗೋಪಿ ಅವರು ಸೇವೆಗೆ ಸೇರಿ ಸೇರ್ಪಡೆ14 ವರ್ಷಗಳಾಗಿವೆ. ಅದರಲ್ಲೂ 12 ವರ್ಷಗಳಿಂದ ಕೋಲಾರದ ಜಿಲ್ಲಾ ಕೇಂದ್ರದಲ್ಲಿಯೇ ಇದ್ದಾರೆ. ಇವರ ಮೂಲ ಬಂಗಾರಪೇಟೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿತ್ತು. ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ವಿಧಾನ ಪರಿಷತ್ ನಲ್ಲಿ ಅಬಕಾರಿ ಸಚಿವರ ಗಮನಕ್ಕೆ ತಂದಾಗ ಈ ಕೂಡಲೇ ಈ ಬಗ್ಗೆ ಗಮನ ಹರಿಸಿ ವರ್ಗಾವಣೆ ಮಾಡುವುದಾಗಿ ಹೇಳಿದರು.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…