Categories: ಕೋಲಾರ

ಕೋಲಾರ ಎಂಎಲ್ಎ ಕ್ಷೇತ್ರಕ್ಕೆ 376 ಕೋಟಿ ಅನುದಾನ: ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ- ಸಚಿವ ಬೈರತಿ ಸುರೇಶ್

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ‌ಅನುದಾನ ಕೊಟ್ಟಿದ್ದೇವೆ ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಕೇಳಿದಷ್ಟು ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು,

ತಾಲೂಕಿನ ನರಸಾಪುರ ಗ್ರಾಮದಲ್ಲಿ ಗುರುವಾರ ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು ಇಡೀ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಆಡಳಿತ ಪಕ್ಷದ ಮೇಲೆ ಹಣ ಖಾಲಿಯಾಗಿದೆ ಎಂದು ಗೂಬೆ ಕೂರಿಸಲು ಹೊರಟಿದ್ದಾರೆ ಜನಕ್ಕೆ ಅಭಿವೃದ್ಧಿ ಕಣ್ಣಾಮುಂದೆಯೇ ಇದೆ ಎಂದರು.

ಹಿಂದಿನ ಬಿಜೆಪಿ ಸರಕಾರದಲ್ಲಿ 40% ಕಮಿಷನ್ ನಿಂದ ಅಭಿವೃದ್ಧಿ ಶೂನ್ಯವಾಗಿತ್ತು ನಮ್ಮ ಸರಕಾರವು ಯಾರಪ್ಪನ ಮನೆಯಿಂದ ಕೂಡ ಹಣ ತಂದಿಲ್ಲ ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ ಜೆಡಿಎಸ್ ಮತ್ತು ಬಿಜೆಪಿ ಸರ್ಕಾರದಲ್ಲಿ ಅವರಿಗೆ ತಿನ್ನಲು ‌ಸಾಕಾಗಲಿಲ್ಲ ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ ಜನರ ಸೇವೆ ಮಾಡಲು ಬಂದಿದ್ದು ಅಭಿವೃದ್ಧಿಯೇ ನಮ್ಮ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದ್ದೇವೆ ಬಡವರಿಗೆ ಸಾಮಾನ್ಯ ಜನರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರು ಹೇಳಿದ ಸುಳ್ಳಿನ ಸರಪಳಿಯನ್ನು ತುಂಡರಿಸಿದ್ದೇವೆ ಜನ 136 ಸ್ಥಾನ ಕೊಟ್ಟು ಆಶೀರ್ವಾದ ಮಾಡಿದ್ದಾರೆ ಸರ್ಕಾರವು ಬಿದ್ದು ಹೋಗುತ್ತದೆ ಎಂದು ಬಿಜೆಪಿ ಸುಳ್ಳು ಹೇಳುತ್ತಿದ್ದಾರೆ ಜನಕ್ಕೆ ಅಭಿವೃದ್ಧಿ ಯಾರ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ ಅಭಿವೃದ್ಧಿಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇವೆ ಜನರೇ ಕೆಲಸ ಸರಿಯಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಗುಣಮಟ್ಟದ ಪರೀಕ್ಷೆಯನ್ನು ಗಮನಿಸಬೇಕು ಕಳಪೆ ಕೆಲಸವಾದರೆ ದೂರು ನೀಡಬೇಕು ಮಾಧ್ಯಮದವರ ಗಮನಕ್ಕೆ ತರಬೇಕು ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮತ್ತು ರಾಜಕೀಯ ಮಾಡಬಾರದು ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರಕಾರವು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡತ್ತಿದ್ದು ಇನ್ನೂ ಕೆಲವು ಕಡೆಗಳಲ್ಲಿ ಟೆಂಡರ್ ನಡೆದಿದ್ದು ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ಸಚಿವರಿಗೆ ಮನವಿ ಮಾಡಿ ನರಸಾಪುರ ಕೈಗಾರಿಕಾ ಪ್ರದೇಶವಾಗಿದ್ದು ಇಲ್ಲಿ ಹೊಸದಾಗಿ ಪೋಲಿಸ್ ಹೊರಠಾಣೆಯನ್ನು ಪ್ರಾರಂಭಿಸಬೇಕು ಸೊಸೈಟಿ ನೂತನ ಕಟ್ಟಡಕ್ಕೆ ನಬಾರ್ಡ್ ವತಿಯಿಂದ 70 ಲಕ್ಷ ನೀಡಿದ್ದು ಉಳಿದ ಹಣವನ್ನು ಸಚಿವರು, ಶಾಸಕರು ಎಂಎಲ್ಸಿಗಳ ಮೂಲಕ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮಂಜುನಾಥ್, ಎಂಟಿಬಿ ಶ್ರೀನಿವಾಸ್, ಶ್ರೀರಾಮಪ್ಪ, ಜಾಲಿ ಬಾಬು ಜನಪನಹಳ್ಳಿ ನವೀನ್ ಕುಮಾರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

28 minutes ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

4 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

5 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

12 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

13 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

14 hours ago