Categories: ಕೋಲಾರ

ಕೋಲಾರ ಎಂಪಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಎ.ಟಿ.ಕೃಷ್ಣನ್

ಕೋಲಾರ: ಮುಂಬರುವ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ನನಗೆ ಒಂದು ಅವಕಾಶವನ್ನು ಕ್ಷೇತ್ರದ ಜನತೆ ಮಾಡಿಕೊಡುವಂತೆ ಸಮಾಜ ಸೇವಕ ಹಾಗೂ ಉದ್ಯಮಿ ಎ.ಟಿ.ಕೃಷ್ಣನ್ ಮನವಿ ಮಾಡಿದರು

ನಗರದ ಪತ್ರಕರ್ತರ ‌ಭವನದಲ್ಲಿ‌ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ವಿದ್ಯಾರ್ಥಿ ಜೀವನದಿಂದಲೂ ಸಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ವಿದ್ಯಾರ್ಥಿ, ಯುವಜನ, ಮಹಿಳೆಯರು ಸೇರಿದಂತೆ ರೈತರ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಸಾಕಷ್ಟು ಹೋರಾಟವನ್ನು ನಡೆಸಲಾಗಿದೆ ಅದೇ ರೀತಿಯಲ್ಲಿ ನಿಸ್ವಾರ್ಥ ಸೇವೆ ನಡೆಸಲು ನಿಮ್ಮಗಳ ಕಷ್ಟಗಳಿಗೆ ಸ್ಪಂದಿಸಲು ಚುನಾವಣೆಯಲ್ಲಿ ಸ್ಪಂದಿಸುತ್ತಾ ಇದ್ದೇನೆ ಎಂದರು.

ಆದರ್ಶವಾಗಿರುವ ಹಾಗೂ ಚುನಾವಣೆಗೆ ನಿಲ್ಲಲು ಪ್ರೇರಣೆಯಾಗಿರುವ ಕರ್ನಾಟಕ ರತ್ನ ದಿವಂಗತ ಡಾ.ಪುನೀತ್ ರಾಜ್‍ಕುಮಾರ್ ರವರ ಸೇವೆಯೇ ಮಾದರಿಯಾಗಿದೆ ಚುನಾವಣೆಯಲ್ಲಿ ಪ್ರಚಾರ ನಡೆಸಲು ಪುನೀತ್ ರಾಜ್‍ಕುಮಾರ್ ಅವರ ಸಮಾಧ ಮುಂದೆ ಮಾರ್ಚ್ 30 ರಂದು ಜನರ ಸೇವೆಗೆ ನನ್ನ ಜೀವನ ಮೀಸಲು ಎಂದು ಪ್ರಮಾಣವಚನ ಸ್ವೀಕರಿಸಲಿದ್ದೇನೆ ನಂತರ ಏಪ್ರಿಲ್ 2 ರಂದು ಕೋಲಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವುದಾಗಿ ಹೇಳಿದರು.

ನಾನು 1980 ರಿಂದ ಸಕ್ರಿಯವಾಗಿ ರಾಜಕೀಯದಲ್ಲಿ ಗುರುತಿಸಿ ಕೊಂಡಿರುವುದಲ್ಲದೆ,1988 ರಲ್ಲಿ ರಾಷ್ಟ್ರ ಮಟ್ಟದ ಬ್ಯಾಸ್ಕೆಟ್ ಬಾಲ್ ಟೂರ್ನಮೆಂಟ್ ನಡೆಸಿದ್ದೇನೆ,1994 ರಲ್ಲಿ ಹಾಲು ಉತ್ಪಾದಕರ ಪರ ಹೋರಾಟದ ಮುಂಜೂಣಿ ನಾಯಕನಾಗಿ ಹೋರಾಟ ಮಾಡಿದ್ದೇನೆ ಹಾಗೂ ಗೋಲಿಬಾರ್ ಗೆ ಕಾರಣಕರ್ತರಾದ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಎಸ್ಪಿ ಅಮಾನತ್ತು ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ ಜೊತೆಗೆ ಆಧಾರ್ ಕಾರ್ಡ್ ಗಾಗಿ ಹೋರಾಟ ಮಾಡಿದ್ದೇನೆ.ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ಸಮಸ್ಯೆ ನೀಗಿಸಲು ಎತ್ತಿನ ಹೊಳೆ,ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ.ವ್ಯಾಲಿ ಯೋಜನೆಗಳ ಅನುಷ್ಠಾನಕ್ಕೆ ಹೋರಾಟ ನಡೆಸಿರುವುದರೊಂದಿಗೆ ಅನೇಕ ಸಮಾಜಿಕ ಹೋರಾಟಗಳನ್ನು ನಡೆಸಿರುವುದಾಗಿ
ವಿವರಿಸಿದರು.

ಚುನಾವಣೆಯಲ್ಲಿ ಗೆದ್ದರೂ ಸೋತರೂ ಮುಂದಿನ ದಿನಗಳಲ್ಲಿ ಕೆ.ಜಿ.ಎಫ್ ಚಿನ್ನದ ಗಣಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ, ಗ್ರಾಮಕ್ಕೆ ಒಂದು ಸ್ಮಶಾನಕ್ಕಾಗಿ ಮತ್ತು ಪ್ರತಿ ಶಾಲೆಗೆ ಆಟದ ಮೈದಾನಕ್ಕಾಗಿ ಹೋರಾಟ ನಡೆಸುವುದಾಗಿ ತಿಳಿಸಿದ ಅವರು ನಾನು ಪ್ರಭಾವಿ ರಾಜಕಾರಣಿ ಅಲ್ಲದಿದ್ದರೂ ರಾಜಕೀಯ ಹಿನ್ನಲೆ ಇರುವ ಕುಟುಂಬದಿಂದ ಬಂದಿದ್ದೇನೆ ಹಾಗೂ ನನ್ನ ತಾಯಿಯ ತವರು ಕೋಲಾರ ನಗರ ಹಾಗೂ ನನ್ನ ರಾಜಕೀಯ ಕ್ಷೇತ್ರ ಕೋಲಾರ ಅದ್ದರಿಂದ ಮತ್ತು ಎಲ್ಲಾ ವರ್ಗಗಳ,ಸಮುದಾಯಗಳ ನಿಕಟ ಸಂಪರ್ಕ ಹೊಂದಿರುವುದರಿಂದ ಲೋಕಸಭೆಗೆ ಪಕ್ಷೇತರ
ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಾಗಿ ತಿಳಿಸಿದರು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸರೆಡ್ಡಿ ಇದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago