ನವದೆಹಲಿ: ಕೆ.ಎಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣಗಳ ತೀವ್ರ ಕಾದಾಟದಿಂದ ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದಿಂದ ಹೊಸ ಮುಖವನ್ನು ಕಣಕ್ಕಿಳಿಸಲಾಗಿದೆ.
ಶನಿವಾರ ಈ ಕುರಿತು ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಐಸಿಸಿ, ಕೆ.ವಿ.ಗೌತಮ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ಸಚಿವ ಕೆ.ಎಚ್.ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು. ರಮೇಶ್ ಕುಮಾರ್ ಬಣ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಮೂರನೇ ವ್ಯಕ್ತಿಗೆ ಟಿಕೆಟ್ ನೀಡಿ ಎಐಸಿಸಿ ವರಿಷ್ಠರು ತೀರ್ಮಾನ ಪ್ರಕಟಿಸಿದ್ದಾರೆ.