ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು.
ಗದ್ದೆಹಳ್ಳ ಗಿರಿಯಪ್ಪ ಮನೆ ನಿವಾಸಿ ಶ್ರೀರಾಮ್ ಎಂಬಾತನಿಗೆ ತಮ್ಮ ಮನೆಯ ಅನತಿ ದೂರದಲ್ಲಿರುವ ಸುಬ್ರಮಣಿ ಎಂಬಾತನೊಂದಿಗೆ ಕೋಳಿ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಿತನಾದ ಶ್ರೀರಾಮ್ ತನ್ನ ಮನೆಯಲ್ಲಿ ಇರಿಸಿದ್ದ ಏರ್‌ಗನ್ ತಂದು ಏಕಾಏಕಿ ಸುಬ್ರಮಣಿಗೆ ಹೊಟ್ಟೆಯ ಭಾಗಕ್ಕೆ ಗುಂಡು ಹಾರಿಸಿದ್ದಾನೆ.
ಗಾಯಗೊಂಡಿದ್ದ ಸುಬ್ರಮಣಿಯನ್ನು ಕೂಡಲೇ ಸ್ಥಳೀಯರು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣದ ಆರೋಪಿ ಶ್ರೀರಾಮ್‌ನನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…