ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 25 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

9 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

15 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago