ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

5 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

6 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

6 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

7 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

19 hours ago