ಬೆಂಗಳೂರು: ದೀರ್ಘಕಾಲದ ಸೊಂಟ ನೋವಿನಿಂದ ಬಳಲುತ್ತಿದ್ದ ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್ ಸಹಾಯದ ಮೂಲಕ “ಹಿಪ್ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.ಸಲಾಯಿತು.
ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ಪ್ರಧಾನ ನಿರ್ದೇಶಕ ನಾರಾಯಣ್ ಹುಲ್ಸೆ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಬಳಿಕವೇ ರೋಗಿಯು ನಡೆಯಲು ಸಶಕ್ತರಾಗಿದ್ದರು. ಈ ಕುರಿತು ಮಾತನಾಡಿದ ಡಾ. ನಾರಾಯಣ್ ಹುಲ್ಸೆ, ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ರೋಗಿಯು ಮೂರು ವರ್ಷದ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿ, ಅದರ ಅಡ್ಡಪರಿಣಾಮದಿಂದ ಅವಾಸ್ಕುಲರ್ ನೆಕ್ರೋಸಿಸ್ (AVN) ಗೆ ಒಳಗಾಗಿ, ದೀರ್ಘಕಾಲದ ಸೊಂಟದ ನೋವಿನಿಂದ ಬಳಲುತ್ತಿದ್ದರು. ವಿಶ್ವಾದ್ಯಂತ ಅನೇಕ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದರೂ ಎಲ್ಲಿಯೂ ಸಫಲ ಕಾಣಲಿಲ್ಲ, ಅಷ್ಟೆ ಅಲ್ಲದೆ, ಎರಡು ವಿಫಲ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಇಲ್ಲಿ ನಮ್ಮ ತಂಡ ಅವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರು ಎರಡೂ ಭಾಗದಲ್ಲೂ ಸೊಂಟ ಸರಿಪಡಿಸುವ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಿರ್ಧರಿಸಲಾಯಿತು, ಅತ್ಯಾಧುನಿಕ ರೋಬೋಟ್ ಸಹಾಯದಿಂದ ಅವರಿಗೆ ಹಿಪ್ ಬದಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಯಿತು.
ರೋಗಿಯು ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ದಿನವೇ ನಡೆದಾಡಲು ಸಾಧ್ಯವಾಯಿತು ಎಂದು ವಿವರಿಸದರು,
ಬೆಂಗಳೂರಿನ ಫೋರ್ಟಿಸ್ ಹಾಸ್ಪಿಟಲ್ಸ್‌ನ ಬಿಸಿನೆಸ್ ಹೆಡ್ ಶ್ರೀ ಅಕ್ಷಯ್ ಒಲೇಟಿ, “ಫೋರ್ಟಿಸ್‌ನಲ್ಲಿ, ಇತ್ತೀಚಿನ ರೊಬೊಟಿಕ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಅತ್ಯಾಧುನಿಕ ಚಿಕಿತ್ಸೆಯನ್ನು ಒದಗಿಸಲು ನಾವು ಹೆಮ್ಮೆಪಡುತ್ತೇವೆ. ಇದು ಹೆಚ್ಚು ನಿಖರವಾದ, ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸೆಗಳನ್ನು ನೀಡಲು ನಮಗೆ ಅನುವು ಮಾಡಿಕೊಡುತ್ತದೆ, ಇದು ವೇಗವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಒಟ್ಟಾರೆ ರೋಗಿಯ ಅನುಭವವನ್ನು ಉತ್ತೇಜಿಸುತ್ತದೆ.
ನಮ್ಮ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ನವೀನ ತಂತ್ರಜ್ಞಾನಗಳನ್ನು ನಿರಂತರವಾಗಿ ಸಂಯೋಜಿಸಲು ನಾವು ಬದ್ಧರಾಗಿದ್ದೇವೆ. ಎಂದು ಹೇಳಿದರು
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…