ಕೋವಿಡ್-19 ತಡೆಗೆ ಮಾರ್ಗಸೂಚಿಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಕರೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ್.ಎನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ ಅವರ ಜಂಟಿ ಅಧ್ಯಕ್ಷತೆಯಲ್ಲಿ ಕೋವಿಡ್-19 ರ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಯಲು ಅಗತ್ಯ ಕ್ರಮ ಗಳನ್ನು ಕೈಗೊಂಡು, ಕೋವಿಡ್-19  ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸಲು ಸೂಕ್ತ ಮಾರ್ಗದರ್ಶನ ನೀಡಲು ಸೂಚಿಸಲಾಯಿತು.

ಕೋವಿಡ್-19 ಪರೀಕ್ಷೆಯ ಮಾದರಿಗಳನ್ನು ಸಂಗ್ರಹಿಸಿ ಗುರಿ ಸಾಧಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಲಾಯಿತು. ಎಲ್ಲಾ SARI (Severe Acute Respiratory Infection)  ಪ್ರಕರಣಗಳು ಹಾಗೂ 20  ILI  ( influenza like illness) ಪ್ರಕರಣಗಳ ಪೈಕಿ 1 ILI  ಪ್ರಕರಣವನ್ನು ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಯಿತು.

ಕೋವಿಡ್ -19 ಸೋಂಕು ಹರಡದಂತೆ ಪರಿಷ್ಕರಿಸ್ಪಟ್ಟ(revised) ಮಾರ್ಗಸೂಚಿಗಳನ್ನು ಪಾಲಿಸಲು ಸೂಚಿಸಲಾಯಿತು.

60 ವರ್ಷಕ್ಕಿಂತ ಮೇಲ್ಪಟ್ಟ ವರು, ಗರ್ಭಿಣಿಯರು ಮತ್ತು ಇತರೆ CO-MORBID, ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಇತರೆ ತೊಂದರೆಗಳಿರುವವರು ಕೋವಿಡ್-19 ಮುಂಜಾಗ್ರತ ಕ್ರಮಗಳನ್ನು ವಹಿಸಬೇಕು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಸರಬರಾಜು ಮತ್ತು ಕೋವಿಡ್-19 ಚಿಕಿತ್ಸೆಗೆ ಅವಶ್ಯಕತೆ ಇರುವ ತುರ್ತು ಔಷಧಿಗಳನ್ನು ದಾಸ್ತಾನು ಇಡಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಎಂ. ಸಿ. ಸುನಿಲ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ, ಡಾ.ಮುರಳಿ ಮೋಹನ್, ಎಲ್ಲಾ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *