ಕೋವಿಡ್- 19 ರಿಟರ್ನ್ಸ್: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್: ಕೋವಿಡ್ ಸೂಚನೆಗಳ ಜಾರಿ

ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿ, ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದು ಈ ಕೆಳಗಿನ ಸೂಚನೆಗಳನ್ನು ನೀಡಿದರು.

* ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

* ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.

* ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.

* ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

* ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

* ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

* ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.

* ಕಳೆದ ಜನವರಿಯಿಂದಲೂ
ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

* ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.

* ರಾಜ್ಯದಲ್ಲಿ ಕೊರೊನಾ ಹರಡದಂತೆ
ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

* ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

* ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು.

* ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ
ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.

* ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.

* ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.

* ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.

* ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

1 hour ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

3 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

3 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

4 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

15 hours ago