ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುದ್ದಿ ತಿಳಿದ 20 ನಿಮಿಷದಲ್ಲಿ ವ್ಯಕ್ತಿಯನ್ನ ಪತ್ತೆ ಮಾಡಿದ ಪೊಲೀಸರು ಆತನ ಜೀವ ಕಾಪಾಡಿರುವ ಘಟನೆ ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲ್ (27) ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ASI ನಾಗೇಶ್ ಮತ್ತು APC ಸಂಜೀವ್ ಕುಮಾರ್ ರವರು ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದಾರೆ.
ವ್ಯಕ್ತಿಯ ಜೀವ ರಕ್ಷಣೆ ಮಾಡುವ ವೇಳೆ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಅದ್ದಿಗಾನಹಳ್ಳಿಯ ನಿವಾಸಿ ಗೋಪಾಲ್ ನಿನ್ನೆ ರಾತ್ರಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ. ಸಾಯುವ ಮುನ್ನ ಆತ ತನ್ನ ತಂಗಿ ಲತಾಗೆ ಫೋನ್ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾನೆ. ತಕ್ಷಣವೇ ಆಕೆ 112 ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಗೋಪಾಲ್ ಪತ್ತೆಗೆ ಮುಂದಾದ ರಾಜಾನುಕುಂಟೆ ಪೊಲೀಸರು ಆತನ ಮೊಬೈಲ್ ಲೋಕೇಷನ್ ಪತ್ತೆ ಮಾಡಿ ಸ್ಥಳಕ್ಕೆ ಹೋಗಿದ್ದಾರೆ. ಪೊಲೀಸರನ್ನ ಕಂಡ ಆತ ರೈಲ್ವೆ ಟ್ರ್ಯಾಕ್ ಮೇಲೆ ಓಡಲು ಪ್ರಾರಂಭಿಸಿದ್ದಾನೆ. ಆತನ ಬೆನ್ನತ್ತಿದ ಪೊಲೀಸರು ಆತ್ಮಹತ್ಯೆ ಯತ್ನ ತಡೆದಿದ್ದಾರೆ.
ರಾಜಾನುಕುಂಟೆ ಪೊಲೀಸ್ ಠಾಣೆಗೆ ಕರೆತಂದು ಆರೈಕೆ ಮಾಡಿ ನಂತರ ಅವರಿಗೆ ಧೈರ್ಯ ತುಂಬಿ ಕುಟುಂಬದವರಿಗೆ ಒಪ್ಪಿಸಿ ಸಮಯ ಪ್ರಜ್ಞೆ ಮೆರೆದಿರುತ್ತಾರೆ.
ಪೊಲೀಸರು ಸಕಾಲಕ್ಕೆ ಧಾವಿಸಿ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದು, ಎರಡು ನಿಮಿಷ ತಡವಾಗಿದ್ದಲ್ಲಿ, ಇದೇ ಮಾರ್ಗದಲ್ಲಿ ಹಾದು ಹೋದ ರೈಲಿಗೆ ಆತ ಬಲಿಯಾಗುತ್ತಿದ್ದ ಎನ್ನಲಾಗಿದೆ.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…