ಯುಗಾದಿ ಹಬ್ಬದ ದಿನವೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ವೀರಾಪುರ ಗ್ರಾಮದ ನಿವಾಸಿ ಸುಮಾರು 40 ವರ್ಷದ ವಾಸು ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ನೇಣಿಗೆ ಶರಣಾಗಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತ ದುರ್ದೈವಿಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಕುಡಿತದ ನಶೆಯಲ್ಲಿ ನಾನು ಸಾಯುತ್ತೇನೆ ಎಂದು ಕಾಳು ಮಾತ್ರಿ ಕೈಯಲ್ಲಿ ಹಿಡಿದು ಎಲ್ಲರಿಗೂ ಹೇಳಿಕೊಂಡು ತಿರುಗಾಡುತ್ತಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ.
ಕ್ಷುಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು, ಗಂಡ ಹೆಂಡತಿ ಜಗಳ ಮೂರು ದಿನಗಳ ಹಿಂದೆಯಷ್ಟೇ ಪೊಲೀಸ್ ಠಾಣೆಗೆ ಹೋಗಿದ್ದು, ಪೊಲೀಸರು ಇಬ್ಬರನ್ನು ಕರೆಸಿ ಬುದ್ದಿವಾದ ಹೇಳಿ ಕಳಿಸಿದ್ದರು ಎಂದು ತಿಳಿದುಬಂದಿದೆ.
ಆದರೆ, ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.