ಕೌಟುಂಬಿಕ ಕಲಹ: ಯುಗಾದಿ ಹಬ್ಬದ ದಿನವೇ ನೇಣಿಗೆ ಶರಣಾದ ವ್ಯಕ್ತಿ

ಯುಗಾದಿ ಹಬ್ಬದ ದಿನವೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ವೀರಾಪುರ ಗ್ರಾಮದ ನಿವಾಸಿ ಸುಮಾರು 40‌ ವರ್ಷದ ವಾಸು ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹ‌ ಹಿನ್ನೆಲೆ ನೇಣಿಗೆ ಶರಣಾಗಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತ ದುರ್ದೈವಿಗೆ‌ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಕುಡಿತ‌ದ ನಶೆಯಲ್ಲಿ ನಾನು ಸಾಯುತ್ತೇನೆ ಎಂದು ಕಾಳು ಮಾತ್ರಿ ಕೈಯಲ್ಲಿ ಹಿಡಿದು‌ ಎಲ್ಲರಿಗೂ ಹೇಳಿಕೊಂಡು ತಿರುಗಾಡುತ್ತಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ.

ಕ್ಷುಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು, ಗಂಡ ಹೆಂಡತಿ ಜಗಳ ಮೂರು ದಿನಗಳ ಹಿಂದೆಯಷ್ಟೇ ಪೊಲೀಸ್ ಠಾಣೆಗೆ ಹೋಗಿದ್ದು, ಪೊಲೀಸರು ಇಬ್ಬರನ್ನು ಕರೆಸಿ ಬುದ್ದಿವಾದ ಹೇಳಿ ಕಳಿಸಿದ್ದರು ಎಂದು ತಿಳಿದುಬಂದಿದೆ.

ಆದರೆ, ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

5 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

7 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

18 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

22 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

23 hours ago