ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಸೂಚನೆ

ಕೌಶಲ್ಯ ಕರ್ನಾಟಕ ಯೋಜನೆ‌‌ಯಡಿ ತರಬೇತಿಗಾಗಿ ನೊಂದಣಿಯಾಗಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದು, ತರಬೇತಿ ಪಡೆದುಕೊಂಡಿರುವವರ ಸಂಖ್ಯೆ ಕ್ಷೀಣಿಸಿರುವ ಹಿನ್ನೆಲೆ, ನೋಂದಾಯಿತ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಮೂಲಕ ತರಬೇತಿ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಿಸಲು ಕಟ್ಟುನಿಟ್ಟಿನ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆದುಕೊಳ್ಳಲು ಒಟ್ಟು 15,063 ಅಭ್ಯರ್ಥಿಗಳು ನೊಂದಾಯಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಹೆಚ್ಚಾಗುತ್ತಿದ್ದು, ವಿವಿಧ ವೃತ್ತಿಪರ ತರಬೇತಿಗಳನ್ನು ನೀಡಿದಾಗ ಮಾತ್ರ ಉದ್ಯೋಗ ಕಲ್ಪಿಸಿಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿ ನೀಡಲು ಸಮರ್ಪಕ ತರಬೇತಿ ಕೇಂದ್ರಗಳ ಅವಶ್ಯಕತೆ ಇದ್ದು, ತರಬೇತಿ ಕೇಂದ್ರಗಳನ್ನು ಗುರುತಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 22 ಐ.ಟಿ.ಐ ಸಂಸ್ಥೆಗಳಿದ್ದು, ಈ ಪೈಕಿ 5 ಸರ್ಕಾರಿ ಐಟಿಐ ಸಂಸ್ಥೆಗಳು ಹಾಗೂ 17 ಖಾಸಗಿ ಐ.ಟಿ.ಐ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಸಿಬ್ಬಂದಿ ಕೊರತೆಯಿಂದ ಸಂಸ್ಥೆಗಳಲ್ಲಿ ತರಬೇತಿ ಕಾರ್ಯ ಪ್ರಗತಿಯಲ್ಲಿರದ ಹಿನ್ನೆಲೆ, ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ವಹಿಸಿ ಐಟಿಐ ಸಂಸ್ಥೆಗಳಲ್ಲಿ ತರಬೇತಿ ನೀಡಲು ಕ್ರಮವಹಿಸಲಾಗುವುದು ಎಂದರು.

ಕೈಗಾರಿಕಾ ಸಂಸ್ಥೆಗಳ ಜೊತೆ ಚರ್ಚಿಸಿ ಅವಶ್ಯವಿರುವ ಕಡೆ ತರಬೇತಿಯನ್ನು ಕಲ್ಪಿಸಿ, ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡಬೇಕು ಎಂದರಲ್ಲದೆ, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ತರಬೇತಿ ಸಂಸ್ಥೆಗಳು ತರಬೇತಿಗಾಗಿ ರಚಿಸಿರುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿ, ಕೌಶಲ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಕೃಷಿ, ಕೈಗಾರಿಕೆ, ಸಮಾಜ ಕಲ್ಯಾಣ, ಪಶು ಸಂಗೋಪನೆ ಹಾಗೂ ಇನ್ನಿತರ ಇಲಾಖೆಗಳು ವಿವಿಧ ತರಬೇತಿಗಳನ್ನು ನೀಡುತ್ತಿದ್ದು, ಕೌಶಲ್ಯ ಕರ್ನಾಟಕ ಯೋಜನೆಯಡಿ ಮತ್ತಷ್ಟು ತರಬೇತಿಗಳನ್ನು ನೀಡಿ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪ್ರತಿಯೊಂದು ಇಲಾಖೆಯ ಸಮನ್ವಯತೆ, ಸಹಕಾರದಿಂದ ಈ ಯೋಜನೆ ಯಶಸ್ವಿ ಆಗಲು ಸಾಧ್ಯವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಜಗನ್ನಾಥ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ತರಬೇತಿ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 minutes ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

2 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

4 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

4 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

9 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

11 hours ago