ಕ್ಯಾಂಟರ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನಂದಿ ಮೋರಿ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.
ಬೆಸ್ಕಾಂ ನಗರ ಉಪವಿಭಾಗದ ಕಂದಾಯ ವಿಭಾಗದಲ್ಲಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಲ್.ರಘುನಂದನ್ ಮೃತರು.
ಭಾನುವಾರ ರಾತ್ರಿ 10.30 ರ ಸುಮಾರಿಗೆ ನಂದಿ ಮೋರಿ ಕಡೆಯಿಂದ ಬರುತ್ತಿದ್ದಾಗ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತಕ್ಷಣವೇ ಕ್ಯಾಂಟರ್ ಚಾಲಕ ಅಂಬುಲೆನ್ಸ್ ಕರೆಸಿ, ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ತೀವ್ರ ಗಾಯಗೊಂಡಿದ್ದ ರಘುನಂದನ್ ಮೃತಪಟ್ಟಿದ್ದಾರೆ.
ರಘುನಂದನ್ ಅವರು ಮೂಲತಃ ಕನಕಪುರದವರಾಗಿದ್ದು, ಕೆಲಸದ ನಿಮಿತ್ತ ಇಲ್ಲಿಯೇ ವಾಸವಾಗಿದ್ದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…