ನಟ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ವಿಗ್ ಧರಿಸಿ ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಶಿವಣ್ಣನ ಹೊಸ ಲುಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
ಮಿಯಾಮಿಯಲ್ಲಿ ಚಿಕಿತ್ಸೆ ಪಡೆದ ನಂತರ, ಅವರು ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಇದು ರಾಮ್ ಚರಣ್ ನಟನೆಯ “ಆರ್‌ಸಿ 16” ಎಂದು ಹೇಳಲಾಗುತ್ತಿದೆ.
ಶಿವರಾಜ್ಕುಮಾರ್ ಅವರು ಕಿಮೋ ಥೆರೆಪಿ ಕಾರಣದಿಂದ ಕೂದಲು ತೆಗೆಸಿಕೊಳ್ಳಬೇಕಿತ್ತು. ಇದೇ ಸಂದರ್ಭದಲ್ಲಿ ಅವರು ತಿರುಪತಿಗೆ ತೆರಳಿದ್ದರಿಂದ ಅಲ್ಲಿ ಅವರು ಮುಡಿಕೊಟ್ಟಿದ್ದರು. ಇದೀಗ ಸಿನಿಮಾಗಾಗಿ ಅವರು ಗಡ್ಡ ಮೀಸೆಯನ್ನು ತೆಗೆದಿದ್ದು, ಸಂಪೂರ್ಣವಾಗಿ ಭಿನ್ನವಾಗಿ ವಿಗ್ ಧರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಇದರಿಂದ ಫ್ಯಾನ್ಸ್ ಸಂಭ್ರಮಿಸಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅವರ ಜೊತೆಗೆ ಕ್ಯಾರವನ್ ನಿಂದ ಇಳಿದ ಕೂಡಲೇ, ಅಲ್ಲಿನ ಮಹಿಳೆಯರು ನಟ ಶಿವಣ್ಣ ಅವರಿಗೆ ಆರತಿ ತೆಗೆದು ದೃಷ್ಟಿ ಬೊಟ್ಟು ಇಟ್ಟು ಸ್ವಾಗತಿಸಿದರು. ನಂತರ ಶೂಟಿಂಗ್ ಗೆ ಮರಳಿದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…